ಉಡುಪಿ

ಕಾಪು ರಾಜಕೀಯಕ್ಕೆ ಮಹಿಳೆ ಎಂಟ್ರಿ ! ಈ ಮಹಿಳೆ ಭಾಜಕಾದಲ್ಲಿ ಎದುರಿಸುವರೇ ಬಿಜೆಪಿ, ಕಾಂಗ್ರೇಸ್ ..?

ಉಡುಪಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಪು ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ ನ ಮಹಾಕಾರ್ಯದರ್ಶಿ ಅನುಪಮಾ ಶೆಣೈ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಪು ನನ್ನ ಸ್ವಕ್ಷೇತ್ರ. ಹಾಗಾಗಿ ಬಳ್ಳಾರಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು.

ಫೆ. 18ರಂದು ತನ್ನ ಪಕ್ಷ ನೋಂದಣಿಯಾಗಿದ್ದು, ಬೆಂಡೆಕಾಯಿ ಚಿಹ್ನೆಯನ್ನು ಚುನಾವಣಾ ಆಯೋಗವು ನೀಡಿದೆ. ಪಕ್ಷದ ವತಿಯಿಂದ ರಾಜ್ಯದಲ್ಲಿ 80ರಷ್ಟು ಮಂದಿ ಸ್ಪರ್ಧಿಸಲು ಮುಂದೆ ಬಂದಿದ್ದಾರೆ. ಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ. 30 ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ. ಪಕ್ಷವೊಂದು ಬೇಕು ಎಂಬ ಉದ್ದೇಶದಿಂದ ಕಟ್ಟಿರುವುದೇ ವಿನಾ ಈ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಲ್ಲ ಎಂದು ಅನುಪಮಾ ಹೇಳಿದರು.

ಅಭ್ಯರ್ಥಿ ಅವಕಾಶ 
ನಮ್ಮ ಪಕ್ಷ ಸೇರುವವರಿಗೆ ಕ್ರಿಮಿನಲ್‌ ಹಿನ್ನೆಲೆ ಇರಬಾರದು, ಕನ್ನಡ ಓದಲು, ಬರೆಯಲು ಬರಬೇಕು. ಪಕ್ಷದ ಸದಸ್ಯತ್ವಕ್ಕೆ 20 ರೂ. ವಿನಾ ಬೇರೇನನ್ನೂ ತೆಗೆದುಕೊಳ್ಳುವುದಿಲ್ಲ. ಹೋರಾಟದ ಮನೋಭಾವ ಇರುವವರು ಸ್ಪರ್ಧಿಸಲು ಇಚ್ಛಿಸಿದರೆ ಉಡುಪಿ ಕ್ಷೇತ್ರದಲ್ಲಿ ಅವಕಾಶ ನೀಡಲಾಗುವುದು ಎಂದರು.

ಡಿವೈಎಸ್ ಪಿ ಆಗಿದ್ದಾಗ ನಾನು ಅಪರಾಧಿಗಳ ಬೆಂಡೆತ್ತುತ್ತಿದ್ದೆ. ಈಗ ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು, ಭ್ರಷ್ಟ ರಾಜಕಾರಣಿಗಳನ್ನು ಬೆಂಡೆತ್ತಬೇಕು. ಈ ಕಾರಣಕ್ಕಾಗಿ ಬೆಂಡೆಕಾಯಿ ಚಿಹ್ನೆ ಆಯ್ಕೆ ಮಾಡಲಾಗಿದೆ. ಬೆಂಡೆಕಾಯಿಗೆ ಮತನೀಡಿ ಎಂದು ಅನುಪಮಾ ಶೆಣೈ ಮನವಿ ಮಾಡಿದ್ದಾರೆ.

 

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago