Featured

ಕಾಪು : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ : ವಿನಯ್ ಕುಮಾ‌ರ್ ಸೊರಕೆ – vishwanews24

ಕಾಪು : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ : ವಿನಯ್ ಕುಮಾ‌ರ್ ಸೊರಕೆ

ಕಾಪು: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿರುವ ಪ್ರತಿಭಟನೆ, ಧರಣಿ ಸತ್ಯಾಗ್ರಹ ಅರ್ಥಹೀನವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮುಂಭಾಗದಲ್ಲಿ ನಡೆಸಿದ ಪ್ರತಿಭಟನೆಯ ಉದ್ದೇಶವೇ ಏನೆಂದು ಜನರಿಗೆ ಅರ್ಥವಾಗಿಲ್ಲ. ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮದೇ ಆಡಳಿತದ ವಿರುದ್ಧ ತಾವೇ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿಗರು ಸ್ವತಃ ನಗೆಪಾಟಲಿಗೀಡಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಟೀಕಿಸಿದರು.

ಕಾಪುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಬಹುತೇಕ ಬಿಜೆಪಿಗರು ಗ್ಯಾರಂಟಿ ಯೋಜನೆಯ  ಫಲಾನುಭವಿಗಳೇ ಆಗಿದ್ದಾರೆ. ಬಿಜೆಪಿ ಜನಪ್ರತಿನಿಧಿಗಳು ಗ್ರಾಮ ಪಂಚಾಯತ್‌ಗಳ ಮುಂದೆ ಪ್ರತಿಭಟನೆ ಮಾಡುವುದರ ಬದಲಿಗೆ ಪ್ರತೀ ಗ್ರಾಮ ಪಂಚಾಯತ್‌ನಲ್ಲಿ ಬಿದ್ದಿರುವ ಮನೆ ನಿವೇಶನ, ಹಕ್ಕು ಪತ್ರ ಕುರಿತಾದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಲಿ ಎಂದರು.

ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾ‌ರ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಪಕ್ಷದ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಜ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago