ಕಾಪು: ಉಡುಪಿ ಕಲ್ಸಂಕ ಆಟೋ ರಿಕ್ಷಾ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಪಳ್ಳಿಗುಡ್ಡೆ ಕೋಟೆ ನಿವಾಸಿ ದೀಪಕ್ ಆರ್. (34) ಜ. 1ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವಿವಾಹಿತ ದೀಪಕ್ ಆರ್. ಮದ್ಯ ಸೇವನೆ ಚಟವನ್ನು ಹೊಂದಿದ್ದು, ಜ. 1ರಂದು ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ರೂಂನಲ್ಲಿ ಮಲಗಿದ್ದರು. ಸಂಜೆ ತಾಯಿ ರೂಂಗೆ ಹೋಗಿ ನೋಡಿದಾಗ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಲಾಗಿತ್ತು.
ಬಳಿಕ ನೆರೆಕರೆಯವರು ಸೇರಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ದೀಪಕ್ ರೂಂನ ಟಾರಸಿಯ ಕಬ್ಬಿಣದ ಹುಕ್ಕಿಗೆ ಬಟ್ಟೆ ತುಂಡನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…