ಕಾಪು: ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ಸ್ಮರಣಾರ್ಥ ಗುರುವಾರ ಕಾಪು ಶ್ರೀವೀರಭದ್ರ ಸಭಾಭವನದಲ್ಲಿ ರಕ್ತದಾನ ಶಿಬಿರ ನೆರವೇರಿತು.
ಮುಳುಗು ತಜ್ಞ ಅಶೋಕ್ ಶೆಟ್ಟಿ ದೆಂದೂರು ದಂಪತಿ ಹಾಗೂ ಕಾಪು ಪುರಸಭೆ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. 110 ಯುನಿಟ್ ರಕ್ತ ಸಂಗ್ರಹಿಸಲಾಯಿತು. ದಿ. ಲೀಲಾಧರ ಶೆಟ್ಟಿ ದಂಪತಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀಲಕ್ಷ್ಮೀ ಜನಾರ್ದನ ದೇಗುಲದ ಮೊಕ್ತಸರ ಮನೋಹರ ಎಸ್ ಶೆಟ್ಟಿ, ‘ಲೀಲಾಧರ ಶೆಟ್ಟಿಯವರು ನಮ್ಮನ್ನು ಆಗಲಿ ಒಂದು ವರ್ಷವಾದರೂ ಅವರು ಮಾಡಿದ ಸಮಾಜ ಸೇವೆ ನಿತ್ಯ ನಿರಂತರ’ ಎಂದರು.
ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಮಾತನಾಡಿ, ‘ಸಮಾಜ ಸೇವಕ ದಿ. ಲೀಲಾಧರ ಶೆಟ್ಟಿ ಅವರ ಸಾಮಾಜಿಕ ಸೇವೆ, ರಕ್ತದಾನ ಶಿಬಿರ, ಅಶಕ್ರು-ಶಾಲಾ ಮಕ್ಕಳಿಗೆ ನೀಡಿದ ಸಹಾಯ ಎಂದೂ ಮರೆಯಲಾಗದು’ ಎಂದರು.
ಮಾಜಿ ಶಾಸಕ ಲಾಲಾಜಿ ಆರ್್ರ ಮೆಂಡನ್, ಪುರಸಭಾಧ್ಯಕ್ಷೆ ಕುಮಾರಿ ಹರಿನಾಕ್ಷಿ ದೇವಾಡಿಗ, ಶ್ರೀಧರ್ ಶೆಟ್ಟಿ ಮುಲುಂಡ್, ಯೋಗೇಶ್ ಶೆಟ್ಟಿ, ಜಯಲಕ್ಷ್ಮಿಸುರೇಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಡಾ. ವೀಣಾ ಕುಮಾರಿ, ಡಾ. ರಾಜಶ್ರೀ ಕಿಣಿ, ಮೋಹನ್ ದಾಸ್ ಶೆಟ್ಟಿ ಕರಂದಾಡಿ, ಕುತ್ಯಾರು ಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ ಜಾರ್ಕಳ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…