ಬೆಂಗಳೂರು: ಕಾಪು ಲೈಟ್‌ಹೌಸ್ ಅಭಿವೃದ್ಧಿಗೆ ಹಿಂದಿನ ಸರಕಾರ ಮಂಜೂರು ಮಾಡಿದ್ದ 5 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದೆ. ಇದರಿಂದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಇಲ್ಲವಾಗಿದೆ.
ಕಾಪು ಲೈಟ್ ಹೌಸ್ ಮತ್ತು ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿಧಾನಸಭೆಯಲ್ಲಿ ಆಗ್ರಹಿಸಿದರು.
ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉತ್ತರಿಸಿ, 2022-23ರಲ್ಲಿ ಹಿಂದಿನ ಸರಕಾರದಿಂದ 5 ಕೋ.ರೂ. ಮಂಜೂರು ಮಾಡಿದ್ದರೂ ನಿಧಿ ಇಲ್ಲದ ಕಾರಣ ತಡೆಹಿಡಿಯಲಾಗಿತ್ತು. ಪ್ರಸ್ತುತ “ಒಂದು ಜಿಲ್ಲೆ ಒಂದು ತಾಣ’ ಯೋಜನೆಯಡಿ ಕಾಪು ತಾಲೂಕನ್ನು ರಾಜ್ಯ ಸರಕಾರ ಆಯ್ಕೆ ಮಾಡಿದ್ದು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಕಾಪು ಲೈಟ್‌ಹೌಸ್ ಬೀಚ್ ಮತ್ತು ಅನತಿ ದೂರದಲ್ಲಿರುವ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ನ ಮೂಲಸೌಕರ್ಯ ವೃದ್ಧಿಗೂ ಗಮನಹರಿಸಬೇಕೆಂಬ ಕಾಪು ಶಾಸಕರ ಆಗ್ರಹಕ್ಕೆ ಉತ್ತರಿಸಿದ ಸಚಿವರು, ಒಂದು ಬೀಚ್ ಆದರೆ ತತ್‌ಕ್ಷಣ ಬಜೆಟ್‌ನಲ್ಲಿ ಅಳವಡಿಸಿಕೊಂಡು ಅಭಿವೃದ್ಧಿ ಸಾಧ್ಯವಿದೆ. ಎರಡೂ ಕಡೆ ಅಭಿವೃದ್ಧಿಗೆ ಮುಂದಿನ ಹಂತದ ಬಜೆಟ್‌ನಲ್ಲಿ ಗಮನ ಹರಿಸೋಣ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…