Featured

ಕಾಪು ಲೈಟ್‌ಹೌಸ್‌ ಮತ್ತು ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ : ವಿಧಾನಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ – vishwanews24

ಕಾಪು ಲೈಟ್‌ಹೌಸ್‌ ಮತ್ತು ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ : ವಿಧಾನಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ

ಬೆಂಗಳೂರು: ಕಾಪು ಲೈಟ್‌ಹೌಸ್‌ ಅಭಿವೃದ್ಧಿಗೆ ಹಿಂದಿನ ಸರಕಾರ ಮಂಜೂರು ಮಾಡಿದ್ದ 5 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದೆ. ಇದರಿಂದ ಬೀಚ್‌ಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಇಲ್ಲವಾಗಿದೆ.

ಕಾಪು ಲೈಟ್‌ ಹೌಸ್‌ ಮತ್ತು ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ವಿಧಾನಸಭೆಯಲ್ಲಿ ಆಗ್ರಹಿಸಿದರು.

ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಉತ್ತರಿಸಿ, 2022-23ರಲ್ಲಿ ಹಿಂದಿನ ಸರಕಾರದಿಂದ 5 ಕೋ.ರೂ. ಮಂಜೂರು ಮಾಡಿದ್ದರೂ ನಿಧಿ ಇಲ್ಲದ ಕಾರಣ ತಡೆಹಿಡಿಯಲಾಗಿತ್ತು. ಪ್ರಸ್ತುತ “ಒಂದು ಜಿಲ್ಲೆ ಒಂದು ತಾಣ’ ಯೋಜನೆಯಡಿ ಕಾಪು ತಾಲೂಕನ್ನು ರಾಜ್ಯ ಸರಕಾರ ಆಯ್ಕೆ ಮಾಡಿದ್ದು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಕಾಪು ಲೈಟ್‌ಹೌಸ್‌ ಬೀಚ್‌ ಮತ್ತು ಅನತಿ ದೂರದಲ್ಲಿರುವ ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನ ಮೂಲಸೌಕರ್ಯ ವೃದ್ಧಿಗೂ ಗಮನಹರಿಸಬೇಕೆಂಬ ಕಾಪು ಶಾಸಕರ ಆಗ್ರಹಕ್ಕೆ ಉತ್ತರಿಸಿದ ಸಚಿವರು, ಒಂದು ಬೀಚ್‌ ಆದರೆ ತತ್‌ಕ್ಷಣ ಬಜೆಟ್‌ನಲ್ಲಿ ಅಳವಡಿಸಿಕೊಂಡು ಅಭಿವೃದ್ಧಿ ಸಾಧ್ಯವಿದೆ. ಎರಡೂ ಕಡೆ ಅಭಿವೃದ್ಧಿಗೆ ಮುಂದಿನ ಹಂತದ ಬಜೆಟ್‌ನಲ್ಲಿ ಗಮನ ಹರಿಸೋಣ ಎಂದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago