ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – Vishwanews24
ಕಾಪು : ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯ ಉದ್ಘಾಟನೆ
ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯವನ್ನು ಇಂದು ಉದ್ಘಾಟಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಮತ್ತು ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು – Vishwanews24
