ಉಡುಪಿ

ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ– ಕಾಂಗ್ರೆಸ್ ಜಿದ್ದಾಜಿದ್ದಿನ ಹಣಾಹಣಿ,,,… ವಸಂತ ಸಾಲಿಯಾನ್‌ 5 ಬಾರಿ ಗೆದ್ದ ಕ್ಷೇತ್ರ

ಕಾಪು ತನ್ನದೇ ಆದ ವಿಶಿಷ್ಟತೆ ಹೊಂದಿರುವ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದೆ. ವಸಂತ ಸಾಲಿಯಾನ್ ಹಾಗೂ ಭಾಸ್ಕರ ಶೆಟ್ಟಿ ಅವರಂತಹ ಹಿರಿಯ ರಾಜಕಾರಣಿಗಳನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದ ಕ್ಷೇತ್ರ ಎಂಬ ಹೆಗ್ಗಳಿಕೆ ಈ ಕ್ಷೇತ್ರದ್ದು. ಕಾಂಗ್ರೆಸ್‌ನ ಹಿರಿಯ ನಾಯಕ ವಿನಯ ಕುಮಾರ್ ಸೊರಕೆ ಹಾಲಿ ಶಾಸಕರಾಗಿದ್ದಾರೆ

ಆರಂಭದಲ್ಲಿ ಈ ಕ್ಷೇತ್ರದಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಇತ್ತು. 1983 ಮತ್ತು ಆ ನಂತರದ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆಯೇ ತುರುಸಿನ ಸ್ಪರ್ಧೆ ಏರ್ಪಟ್ಟಿರುವುದನ್ನು ಗಮನಿಸಬಹುದು.

ಭಾಸ್ಕರ್ ಶೆಟ್ಟಿ ಅವರು ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಎರಡು ಬಾರಿ ಪಿಎಸ್‌ಪಿ ಅಭ್ಯರ್ಥಿಯಾಗಿ ಜಯ ಗಳಿಸಿದರೆ, ಇನ್ನೆರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಭೇರಿ ಬಾರಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಆಯ್ಕೆಯಾದ ವಸಂತ ಸಾಲಿಯಾನ್ ಅವರನ್ನು ಆ ಕ್ಷೇತ್ರದ ಜನತೆ ಸತತ ಐದು ಬಾರಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳುಹಿಸಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್ ಅವರ ಎದುರು ಪರಾಜಯಗೊಂಡ ವಸಂತ್ ಸಾಲಿಯಾನ್ ಅವರು ಆ ನಂತರ ಗೆದ್ದಿಲ್ಲ. ಲಾಲಾಜಿ ಅವರು ಸತತ ಎರಡು ಬಾರಿ ಜಯ ಗಳಿಸಿ ಮೂರನೇ ಬಾರಿಗೆ ಸೋತಿದ್ದಾರೆ. ಈಗ ಅವರು ಮತ್ತೊಮ್ಮೆ ಸ್ಪರ್ಧಿಸುವ ಉಮೇದಿನಲ್ಲಿ ಇದ್ದಾರೆ.

ಕಡಿಮೆ ಅಂತರದಲ್ಲಿ ಅಭ್ಯರ್ಥಿಗಳು ಸೋತಿರುವ ಹಲವು ಉದಾಹರಣೆಗಳನ್ನು ಕಾಣಬಹುದು. 1962ರಲ್ಲಿ ಕಾಂಗ್ರೆಸ್‌ನ ಪಿಂಟೊ ಅವರು ಪಿಎಸ್‌ಪಿಯ ಭಾಸ್ಕರ ಶೆಟ್ಟಿ ಅವರ ವಿರುದ್ಧ ಕೇವಲ 183 ಮತಗಳ ಅಂತರದಿಂದ ಸೋತಿದ್ದರು. 2008ರಲ್ಲಿ ಲಾಲಾಜಿ ಮೆಂಡನ್ ಅವರು ವಸಂತ ಸಾಲಿಯಾನ ಅವರನ್ನು 967 ಮತಗಳ ಅಂತರದಿಂದ ಮಣಿಸಿದ್ದರು. ಇದೇ ಲಾಲಾಜಿ ಅವರು 2004ರಲ್ಲಿ ಸಾಲಿಯಾನ್ ವಿರುದ್ಧ ಕೇವಲ 1,390 ಮತಗಳ ಅಂತರದಿಂದ ಗೆದ್ದಿದ್ದರು. ಹಾಲಿ ಶಾಸಕ ವಿನಯ ಕುಮರ್ ಸೊರಕೆ ಅವರು ಕಳೆದ ಚುನಾವಣೆಯಲ್ಲಿ 1,885 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದನ್ನು ಸಹ ಸ್ಮರಿಸಬಹುದು.

ಈಗಂತೂ ಈ ಕ್ಷೇತ್ರ ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಕ್ಷೇತ್ರವಾಗಿ ಮಾರ್ಪಟ್ಟಿದೆ. ಜೆಡಿಎಸ್‌ ಇದ್ದರೂ ಗಮನ ಸೆಳೆಯುವಂತೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿತ್ತು. ಬಿಜೆಪಿ ವಿರುದ್ಧ ದೊಡ್ಡ ಮಟ್ಟದಲ್ಲಿ ಆಡಳಿತ ವಿರೋಧಿ ಅಲೆ ಇದ್ದರೂ ಕಾಂಗ್ರೆಸ್ ಅಭ್ಯರ್ಥಿ ಸೊರಕೆ ಅವರು ಕಡಿಮೆ ಅಂತರದಿಂದ ಗೆಲುವು ಸಾಧಿಸಿದ್ದರು. ಕ್ರಿಶ್ಚಿಯನ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರವಿದು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

14 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

15 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

15 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

15 hours ago