Featured

ಕಾಪು : ವಿನಯ್ ಕುಮಾರ್ ಸೊರಕೆಯವರ ಸಾರಥ್ಯದಲ್ಲಿ ಸೆ.30 ರಂದು “ಕಾಪು ಪಿಲಿ ಪರ್ಬ ಸೀಸನ್-3 ” – vishwanews24

ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಆಯೋಜನೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಮಾರ್ಗದರ್ಶನದಲ್ಲಿ ಸೆ.30 ರ ಮಂಗಳವಾರ ಸಂಜೆ 4 ಗಂಟೆಗೆ “ಕಾಪು ಪಿಲಿ ಪರ್ಬ ಸೀಸನ್-3” ಕಾರ್ಯಕ್ರಮವು ಕಾಪು ಹೊಸ ಮಾರಿಗುಡಿ ದೇವಸ್ಥಾನ ಆವರಣದಲ್ಲಿ ಜರಗಲಿದೆ ಎಂದು ರಕ್ಷಣಾಪುರ ಜವನೆರ್ ಕಾಪು ಇದರ ಅಧ್ಯಕ್ಷ ನವೀನ್ ಎನ್ ಶೆಟ್ಟಿ ಹೇಳಿದರು.

ಅವರು ಕಾಪು ಪತ್ರಿಕಾ ಭವನದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ವಧರ್ಮದ ಗುರುಗಳ ಉಪಸ್ಥಿತಿಯಲ್ಲಿ ಕಾಪು  ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮನೋಹರ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ.

ಉಭಯ ಜಿಲ್ಲೆಗಳ ಮುಖಂಡರುಗಳು, ರಾಜ್ಯಮಟ್ಟದ ಪ್ರಮುಖರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಪ್ರತಿಷ್ಠಿತ ವಯೋಲಿನ್, ಚಂಡೆ ವಾದನ ಮತ್ತು ವಿವಿಧ ನೃತ್ಯ ಕಾರ್ಯಕ್ರಮ ನಡೆಯಲಿದೆ.

ವಿವಿಧ ಕ್ಷೇತ್ರದಲ್ಲಿ ಸಮಾಜಮುಖಿಯಾಗಿ ಗುರುತಿಸಿಕೊಂಡಿರುವ 9 ಜನ ಪ್ರಮುಖರನ್ನು ವೇದಿಕೆಯಲ್ಲಿ ಸನ್ಮಾನಿಸಲಾಗುವುದು.

ಸ್ಪರ್ಧಾ ಕಾರ್ಯಕ್ರಮದಲ್ಲಿ ಪ್ರಮುಖ 10 ತಂಡಗಳು ಭಾಗವಹಿಸುತ್ತಿದ್ದು, ಕರಾವಳಿಯ ಸಾಂಸ್ಕೃತಿಕ ಕಾರ್ಯಕ್ರಮದ ಹುಲಿವೇಷದಾರಿಗಳ ಅಬ್ಬರ ನಡೆಯಲಿದೆ.

ವಿಜೇತ ತಂಡಗಳಿಗೆ ಪ್ರಥಮ ರೂ.1 ಲಕ್ಷ 50 ಸಾವಿರ, ದ್ವಿತೀಯ ರೂ.1 ಲಕ್ಷ, ತೃತೀಯ ರೂ. 50 ಸಾವಿರ ನಗದು ಬಹುಮಾನ ನೀಡಲಾಗುವುದು.

ಅಲ್ಲದೆ ವಿಶೇಷ ಕರಿಹುಲಿ, ಅಕ್ಕಿ ಮುಡಿ ಹಾರಿಸುವುದಕ್ಕೆ, ಅತ್ಯುತ್ತಮ ಹುಲಿ ಕುಣಿತಗಾರ, ವಿಶೇಷ ಮರಿಹುಲಿ, ಅತ್ಯುತ್ತಮ ತಾಸೆ, ವಿಶೇಷ ನಗದು ಬಹುಮಾನ ನೀಡಲಾಗುವುದು ಎಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಪು ಪಿಲಿ ಪರ್ಬವು ಉಡುಪಿ ಜಿಲ್ಲೆಯಲ್ಲಿ ನಡೆಯುವ ಸ್ಪರ್ಧಾತ್ಮಕ ಕಾರ್ಯಕ್ರಮ. ಸಂಸ್ಕತಿ ಉಳಿವಿನ ಜೊತೆಗೆ ಯುವ ಜನರಿಗೆ ಕಲೆಯಲ್ಲಿ ಆಸಕ್ತಿ ವಹಿಸಲು ಪೂರಕವಾಗಿದೆ. ಸರ್ವ ಜನರೂ ಭಾಗವಹಿಸುವ ಜೊತೆಗೆ ಕಾಪುವಿನ ಪ್ರತಿಷ್ಠಿತ ಕಾರ್ಯಕ್ರಮವಾಗಿ ರೂಪಿಸುವುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್‌ ಅಧ್ಯಕ್ಷ ನಿಯಾಝ್ ಅಹಮ್ಮದ್, ಮಹಿಳಾ ಘಟಕಾಧ್ಯಕ್ಷೆ ಶಾಂತಲತಾ ಶೆಟ್ಟಿ, ಅಲ್ಪ ಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಶರ್ಫುದ್ದೀನ್ ಶೇಖ್,ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಾಪು ದಿವಾಕರ ಶೆಟ್ಟಿ, ‌ಗಣೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

11 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

11 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

12 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

12 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

15 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

15 hours ago