ಉಡುಪಿ

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ಸೌತ್ ಕೆನರಾ ಪೋಟೊ ಗ್ರಾಫರ್ಸ್ ಅಸೋಸಿಯೇಶನ್ ಕಾಪು ವಲಯ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ನಡೆಯಿತು. ಈ ಸಂದರ್ಭ ಛಾಯಾಗ್ರಹಕರ ಕುಟುಂಬದ ಕೊರೊನಾ ವಾರಿಯರ್ಸ್ ಗೆ ಅವರ ಮನೆಗಳಲ್ಲಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾಪು ವಲಯದ ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಅವರ ಪತ್ನಿ, ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಗೀತಾ ಬಾಲಕೃಷ್ಣ ಅವರನ್ನು ಅವರ ಉಚ್ಚಿಲದ ‘ಶ್ರೀ ಭಾಗ್ಯ’ ಮನೆಯಲ್ಲಿ ಸನ್ಮಾನಿಸಿದರೆ, ಬೆಳ್ಮಣ್ಣಿನ ಛಾಯಾಗ್ರಾಹಕ ವಿಲ್ಫ್ರೆಡ್ ಕ್ಯಾಸ್ತಲಿನೋ ಅವರ ಪತ್ನಿ ಜೇನ್ ಮೇವಿ ವೇಗಸ್ ಅವರನ್ನು ಬೆಳ್ಮಣ್ಣಿನ ಅವರ ಸ್ವಗೃಹದಲ್ಲಿ ಎಸ್‍ಕೆಪಿಎ ಕಾಪು ವಲಯದ ಅಧ್ಯಕ್ಷ ವೀರೇಂದ್ರ ಪೂಜಾರಿ ಮತ್ತು ಅವರ ತಂಡ ಸನ್ಮಾನಿಸಿದರು.

ಆಶಾ ಕಾರ್ಯಕರ್ತೆ ಗೀತಾ ಬಾಲಕೃಷ್ಣ ಪೂಜಾರಿ ಮಾತನಾಡಿ, ಕೋವಿಡ್ 19ನಿಂದ ಆಶಾ ಕಾರ್ಯಕರ್ತೆಯರನ್ನು ಸಮಾಜ ಗುರುತಿಸುವಂತಾಗಿದೆ. ಈಗ ಯಾರ ಮನೆಗೆ ಹೋದರೂ, ಅವರು ಆದರದಿಂದ ಬರಮಾಡಿ ಕೊಳ್ಳುತ್ತಾರೆ. ಅಂತೆಯೇ ಅತ್ಯಂತ ಪ್ರೀತಿಯಿಂದ ಮಾತನಾಡುತ್ತಾರೆ. ಕಾಪು ವಲಯ ಎಸ್‍ಕೆಪಿಎ ಸಂಸ್ಥೆ ನಮಗೆ ಅನ್ನ ನೀಡುವ ಸಂಸ್ಥೆ. ಬೇರೆ ಯಾವುದೇ ಸಂಸ್ಥೆ ಸನ್ಮಾನಿಸಿದಾಗ ಕೊಡದ ಖುಷಿ, ಈಗ ಸಿಕ್ಕಿದೆ ಎಂದರು.

ಬಾಲಕೃಷ್ಣ ಪೂಜಾರಿ ಮಾತನಾಡಿ, ಕಾಪು ಎಸ್‍ಕೆಪಿಎ ಸಂಸ್ಥೆ ಮಾಡಿದ ಸನ್ಮಾನ ಅತೀವ ಸಂತಸ ತಂದಿದೆ. ನಾವು ನಿರೀಕ್ಷಿಸದೆ ಇದ್ದ ಸನ್ಮಾನ ನಮ್ಮ ಮನೆ ಬಾಗಿಲಿಗೆ ಬಂದಿದೆ ಎಂದರು.

ಈ ಸಂದರ್ಭ ಕಾಪು ವಲಯ ಎಸ್‍ಕೆಪಿಎ ಅಧ್ಯಕ್ಷ ವೀರೇಂದ್ರ ಪೂಜಾರಿ, ಕಾರ್ಯದರ್ಶಿ ಸಚಿನ್ ಉಚ್ಚಿಲ, ಕೋಶಾಧಿಕಾರಿ ಸುಜಿತ್ ಕಲ್ಲುಗುಡ್ಡೆ,ಪ್ರಮೋದ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago