Featured

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’

ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ..

ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ

ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್ ಜನ್ಮ ವೈಭವದ ಅಂಗವಾಗಿ ಅ.3 ಮತ್ತು 4ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಟ್ರಸ್ಟಿ ಗೀತಾಂಜಲಿ ಎಂ. ಸುವರ್ಣ ತಿಳಿಸಿದರು.

ಶಂಕರಪುರ ಮಠದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಗ್ಗೆ 7.30ಕ್ಕೆ ಗಣಹೋಮ, 9ಕ್ಕೆ ಪವಮಾನ ಹೋಮ, ಮಧ್ಯಾಹ್ನ 12ಕ್ಕೆ ಆರತಿ, 1ಕ್ಕೆ ಅನ್ನಪ್ರಸಾದ ನಡೆಯಲಿದೆ. ಸಂಜೆ 6ರಿಂದ ರಾಮತಾರಕ ಮಂತ್ರ ಹಾಗೂ 7ಕ್ಕೆ ಮಹಾಪೂಜೆ ಜರುಗಲಿದೆ ಎಂದರು. ಅ.4 ರಂದು ಬೆಳಗ್ಗೆ 7ರಿಂದ ವೈಷ್ಣವೀ ಹವನ, 11ಕ್ಕೆ ಕಲಶಾಭಿಷೇಕ, 11.30ಕ್ಕೆ ಗುರುವಂದನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದ್ದು, ಬಳಿಕ ಅನ್ನಪ್ರಸಾದ ವಿತರಿಸಲಾಗುವುದು.

ಅಂದು ಬೆಳಿಗ್ಗೆ 10.30ಕ್ಕೆ ಪಂಚಾಶತ್ ಜನ್ಮ ವೈಭವಕ್ಕೆ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ಗುರುವರ್ಯರ ದಿವ್ಯ ಉಪಸ್ಥಿತಿಯಲ್ಲಿ ಚಾಲನೆ ದೊರೆಯಲಿದೆ. ಜೋಗಿಮಠ ಕದ್ರಿ ಮಂಗಳೂರು ಶ್ರೀ 1008 ಶ್ರೀ ರಾಜಯೋಗಿ ನಿರ್ಮಲಾನಾಥ್ ಮಹಾರಾಜ್, ಮಂಗಳೂರಿನ ಆದಿಶಕ್ತಿ ಭುವನೇಶ್ವರಿ ಆದಿನಾಥ ಸಿದ್ಧಿಪೀಠದ ಶ್ರೀ ಪ್ರವೀಣ್ ರಾಜ್ ಮಚ್ಚೇಂದ್ರನಾಥ್ ಬಾಬಾ, ಬೆಂಗಳೂರಿನ ಸಿದ್ದಿವಿನಾಯಕ ಶರಭೇಶ್ವರ ಪೀಠದ ಪೀಠಾಧಿಪತಿ ಶ್ರೀ ಮಹರ್ಷಿ ಜಯ ಶ್ರೀನಿವಾಸನ್ ಗುರೂಜಿ, ಕಿಷ್ಕಿಂಧೆ ಸಾಣಾಪುರದ ಶ್ರೀ ಬಾಲಾಂಜನೇಯ ಬೆಟ್ಟದ ಶ್ರೀ ಹನುಮಾನ್ ದಾಸ್ ಬಾಬಾ, ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನ್ ದಾಸ್ ಸ್ವಾಮೀಜಿ, ಧಾರವಾಡ ಶ್ರೀ ಪರಮಾತ್ಮ ಮಹಾ ಸಂಸ್ಥಾನಂ ಶ್ರೀ ಕ್ಷೇತ್ರ ದ್ವಾರಾಪುರದ ಶ್ರೀ ಪರಮಾತ್ಮ ಜೀ ಮಹಾರಾಜ್ ಹಾಗೂ ಚಿಕ್ಕಬಳ್ಳಾಪುರ ಓಂಕಾರ ಮಠದ ಕಾಳೀತನಯ ಡಾ. ಶ್ರೀ ಉಮಾಮಹೇಶ್ವರ ಸ್ವಾಮೀಜಿ ಭಾಗವಹಿಸಲಿದ್ದಾರೆ.

ವರ್ಷಪೂರ್ತಿ ಸೇವಾ ಕಾರ್ಯ: 2026ರ ಅ.10ರಿಂದ 2027ರ ಆ.10ರವರೆಗೆ ಒಂದು ವರ್ಷ ಕಾಲ ದಾನಿಗಳು, ಶಿಷ್ಯರು, ಭಕ್ತರು ಹಾಗೂ ಅಭಿಮಾನಿಗಳ ಸಹಕಾರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಗೋಸೇವೆ, ಅನ್ನದಾನ, ಶಿಕ್ಷಣ ಮತ್ತು ಆರೋಗ್ಯ ಸೇವೆ, ವಸ್ತ್ರ ಹಾಗೂ ಅಗತ್ಯ ವಸ್ತುಗಳ ವಿತರಣೆ, ಹೆಣ್ಣುಮಕ್ಕಳು, ಮಹಿಳೆಯರು ಮತ್ತು ಮಕ್ಕಳ ಸೇವೆ, ವೃದ್ಧರ ಸೇವೆ, ಪರಿಸರ ಸಂರಕ್ಷಣೆ ಹಾಗೂ ತುರ್ತು ನೆರವು ಸೇರಿದಂತೆ ಹಲವು ಸಾಮಾಜಿಕ ಸೇವೆಗಳನ್ನು ನಡೆಸಲಾಗುವುದು. ಇದರೊಂದಿಗೆ ಯೋಗ–ಧ್ಯಾನ ಶಿಬಿರಗಳನ್ನು ಆಯೋಜಿಸಿ ಧರ್ಮಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುವುದು ಎಂದು ಗೀತಾಂಜಲಿ ಸುವರ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ಗಜೇಂದ್ರ ಎಸ್. ಬೇಲೆಮನೆ, ವಿಜಯ್ ಕುಂದರ್ ಹಾಗೂ ನಾಗರಾಜ್ ಬೈಂದೂರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

12 minutes ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

51 minutes ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

3 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

3 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

3 hours ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

5 hours ago