Featured

ಕಾಪು : ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬುಲೆಟ್‌ಗಳಿಗೆ ದಂಡ – Vishwanews24

ಕಾಪು: ಹೆಚ್ಚುವರಿ ಸೈಲೆನ್ಸರ್‌ ಅಳವಡಿಸಿಕೊಂಡು, ಕರ್ಕಶ ಶಬ್ದದೊಂದಿಗೆ ಕಾಪು ಪೇಟೆಯಲ್ಲಿ ಓಡಾಡುತ್ತಿದ್ದ ಬುಲೆಟ್‌ಗಳನ್ನು ಪತ್ತೆ ಹಚ್ಚಿ, ಸವಾರರಿಗೆ ದಂಡ ವಿಧಿಸಿದ ಘಟನೆ  ನಡೆದಿದೆ.

ಪ್ರಾದೇಶಿಕ ಸಾರಿಗೆ ಇಲಾಖೆಯ ಪರವಾನಿಗೆ ರಹಿತವಾಗಿ ಹೆಚ್ಚುವರಿಯಾಗಿ ಸೈಲೆನ್ಸರ್‌ ಅಳವಡಿಸಿ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ 6 ಬುಲೆಟ್‌ಗಳನ್ನು ಪತ್ತೆ ಹಚ್ಚಿದ ಕಾಪು ಪೊಲೀಸರು ಅವರಿಂದ 6,600 ರೂ. ದಂಡ ವಸೂಲಿ ಮಾಡಿದ್ದಾರೆ.

ಕಾಪು ಠಾಣಾಧಿಕಾರಿ ನವೀನ್ ನಾಯಕ್ ಅವರು ಬುಲೆಟ್ ಸವಾರರನ್ನು ಠಾಣೆಗೆ ಕರೆಸಿ ಮೆಕಾನಿಕ್ ಮೂಲಕ ಸೈಲೆನ್ಸರ್ ಗಳನ್ನು ಕಿತ್ತು ತೆಗೆದು, ಸಾಮಾನ್ಯ ಸೈಲೆನ್ಸರ್ ಗಳನ್ನು ಅಳವಡಿಸಿ ಎಚ್ಚರಿಕೆ ನೀಡಲಾಯಿತು. ಆಧುನಿಕ ಮಾದರಿಯ ರಾಕೆಟ್ ಸೈಲೆನ್ಸರ್ ಗಳನ್ನು ಬುಲೆಟ್ ಗಳಿಗೆ ಅಳವಡಿಸಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಹಿನ್ನೆಲೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾಪು ಠಾಣಾಧಿಕಾರಿ ನವೀನ ನಾಯ್ಕ್ ತಿಳಿಸಿದ್ದಾರೆ.

ಆಧುನಿಕ ಮಾದರಿಯ ಡಬ್ಲೂ.ಬಿ.ಇ. ಮತ್ತು ರಾಕೆಟ್‌ ಸೈಲೆನ್ಸರ್‌ಗಳನ್ನು ಬುಲೆಟ್‌ಗಳಿಗೆ ಹಾಕಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಾಪು ಠಾಣಾಧಿಕಾರಿ ನವೀನ್‌ ಎಸ್‌. ನಾಯಕ್‌ ತಿಳಿಸಿದ್ದಾರೆ.

ಕಾಪು ಕ್ರೈಂ ಎಸ್ಸೆ ಜಾನಕಿ, ಪ್ರೊಬೆಷನರಿ ಎಸ್ಸೆ ಸದಾಶಿವ, ಎಎಸ್‌ಐ ಚಂದ್ರಶೇಖರ್‌ ಮೊದಲಾದವರು ಉಪಸ್ಥಿತರಿದ್ದರು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago