Featured

ಕಾಪು ಶರತ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ – vishwanews24

ಕಾಪು ಶರತ್ ಶೆಟ್ಟಿ ಕೊಲೆ ಪ್ರಕರಣ; ಆರೋಪಿ ಯೋಗೀಶ್‌ ಪೊಲೀಸ್‌ ಕಸ್ಟಡಿಗೆ

ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ‍್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಕಾಪು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಶರತ್ ಶೆಟ್ಟಿ ಕೊಲೆ ಬಳಿಕ ಆರೋಪಿ ಯೋಗೀಶ್ ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ. ಇದೀಗ ಆತ ತಾನಾಗಿಯೇ ಮೇ ೨೩ರಂದು ಉಡುಪಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿಯಾಗಿರುವ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರು ಆರೋಪಿ ಯೋಗೀಶ್‌ನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.

ಆರೋಪಿ ಯೋಗೀಶ್‌ನೊಂಡಿಗೆ ಪೊಲೀಸರು ವಿವಿಧೆಡೆ ಸ್ಥಳ ಮಹಜರು ನಡೆಸಿದ್ದಾರೆ. ತನಿಖೆಗಾಗಿ ಆರೋಪಿಯ ಮನೆ, ಹತ್ಯೆ ನಡೆದಿದ್ದ ಪರಿಸರ, ಪಾಂಗಳ ಹೊಳೆ ಸೇರಿ ವಿವಿಧೆಡೆ ಕರೆದೊಯ್ದಿದ್ದಾರೆ. ಆರೋಪಿ ಯೋಗೀಶ್ ಶರತ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

8 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago