ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ‍್ಯಾಗನ್ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ಆಚಾರ್ಯನನ್ನು ಮೇ 30ರ ವರೆಗೆ ಕಾಪು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಶರತ್ ಶೆಟ್ಟಿ ಕೊಲೆ ಬಳಿಕ ಆರೋಪಿ ಯೋಗೀಶ್ ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ. ಇದೀಗ ಆತ ತಾನಾಗಿಯೇ ಮೇ ೨೩ರಂದು ಉಡುಪಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿಯಾಗಿರುವ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರು ಆರೋಪಿ ಯೋಗೀಶ್‌ನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ.
ಆರೋಪಿ ಯೋಗೀಶ್‌ನೊಂಡಿಗೆ ಪೊಲೀಸರು ವಿವಿಧೆಡೆ ಸ್ಥಳ ಮಹಜರು ನಡೆಸಿದ್ದಾರೆ. ತನಿಖೆಗಾಗಿ ಆರೋಪಿಯ ಮನೆ, ಹತ್ಯೆ ನಡೆದಿದ್ದ ಪರಿಸರ, ಪಾಂಗಳ ಹೊಳೆ ಸೇರಿ ವಿವಿಧೆಡೆ ಕರೆದೊಯ್ದಿದ್ದಾರೆ. ಆರೋಪಿ ಯೋಗೀಶ್ ಶರತ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…