ಕಾಪು: ಶರತ್ ಶೆಟ್ಟಿ ಕೊಲೆ ಪ್ರಕರಣ – ಆರೋಪಿಗಳು ನ್ಯಾಯಾಲಯಕ್ಕೆ ಹಾಜರು – Vishwanews24
ಕಾಪು: ಶರತ್ ಶೆಟ್ಟಿ ಕೊಲೆ ಪ್ರಕರಣ – ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
ಉಡುಪಿ : ಫೆ. 5ರಂದು ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ (39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗಳಾದ ಸುರತ್ಕಲ್ನ ಆಕಾಶ್ ಕರ್ಕೇರ (24) ಮತ್ತು ಪ್ರಸನ್ನ ಶೆಟ್ಟಿ (40) ಯನ್ನು ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನು ಆಕಾಶ್ ಕರ್ಕೇರನನ್ನು ಒಂದು ವಾರಗಳ ಪೊಲೀಸ್ ಕಸ್ಟಡಿಗೆ ಹಾಗೂ ಪ್ರಸನ್ನ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
