Featured

ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗೆ ಸಹಕರಿಸಿದಾತನ ವಿರುದ್ಧ ಪ್ರಕರಣ ದಾಖಲು – vishwanews24

ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ ; ಆರೋಪಿಗೆ ಸಹಕರಿಸಿದಾತನ ವಿರುದ್ಧ ಪ್ರಕರಣ ದಾಖಲು

ಕಾಪು: ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ ಸಂದರ್ಭ ಮತ್ತೋರ್ವ ಆರೋಪಿಯ ಬಗ್ಗೆ ಪ್ರಧಾನ ಆರೋಪಿ ಯೋಗೀಶ್‌ ಆಚಾರ್ಯ ಬಾಯ್ಬಿಟ್ಟಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಳೆದ ವರ್ಷ ಫೆ. 5ರಂದು ಪಾಂಗಾಳ ಶರತ್‌ ಶೆಟ್ಟಿ ಹತ್ಯೆಯಾಗಿತ್ತು. ಹತ್ಯೆಗೆ ಸಂಬಂಧಿಸಿದಂತೆ ಕಾಪು ಪೊಲೀಸರು ಆರೋಪಿಗಳಾದ ದಿವೇಶ್‌, ಲಿಖೀತ್‌, ನಾಗರಾಜ್‌ ಮತ್ತು ಸಹಕರಿಸಿದ್ದ ಆಕಾಶ್‌ ಕರ್ಕೇರ, ಮುಕೇಶ್‌, ಪ್ರಸನ್ನ ಶೆಟ್ಟಿ ಅವರನ್ನು ಬಂಧಿಸಿದ್ದರು. ಬಂಧಿತರ ಜತೆಗೆ ಭೂಗತ ಪಾತಕಿ ಕಲಿ ಯೋಗೀಶ್‌ ಮತ್ತು ಯೋಗೀಶ್‌ ಆಚಾರ್ಯ ವಿರುದ್ಧವೂ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಧಾನ ಆರೋಪಿಗಾಗಿ ವಿವಿಧೆಡೆ ಶೋಧ ಕಾರ್ಯ ನಡೆಸಿದ್ದರೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಈ ನಡುವೆ ಶರತ್‌ ಶೆಟ್ಟಿ ಮನೆಯವರು ಹತ್ಯಾ ಆರೋಪಿಯ ಪತ್ತೆಗಾಗಿ ತಮ್ಮ ಕುಟುಂಬದ ವರ್ತೆ – ಪಂಜುರ್ಲಿ ದೈವಗಳ ಮೊರೆ ಹೋಗಿದ್ದರು. ಆರೋಪಿ ಪಾತಾಳದಲ್ಲೇ ಇದ್ದರೂ ಆತನನ್ನು ಹುಡುಕಿ ತರುತ್ತೇವೆ ಎಂದು ದೈವಗಳು ಅಭಯ ನೀಡಿದ್ದವು.

ಪ್ರಕರಣದ ಬಳಿಕ ಒಂದು ವರ್ಷ ಮೂರು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ಯೋಗೀಶ್‌ ಆಚಾರ್ಯ ಮೇ 23ರಂದು ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಆತನನ್ನು ಪ್ರಕರಣದ ಪ್ರಸ್ತುತ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಪೊಲೀಸ್‌ ಕಸ್ಟಡಿಗೆ ತೆಗೆದುಕೊಂಡು, ವಿಚಾರಣೆ ನಡೆಸಿದ್ದರು.

ಪೊಲೀಸ್‌ ವಿಚಾರಣೆ ವೇಳೆ ಆರೋಪಿ ಯೋಗೀಶ್‌ ಆಚಾರ್ಯ ಪಾಂಗಾಳ ಶರತ್‌ ಶೆಟ್ಟಿ ಹತ್ಯೆಗೆ ಕಾರಣವಾದ ಅಂಶಗಳು, ಹತ್ಯೆಯ ಬಳಿಕ ತನಗೆ ತಲೆ ಮರೆಸಿಕೊಳ್ಳಲು ಸಹಕರಿಸಿದ ದುಬಾೖಯಲ್ಲಿರುವ ರಾಜೇಶ್‌ ಆಚಾರ್ಯ ಎಂಬಾತನ ಬಗ್ಗೆ ಬಾಯ್ಬಿಟ್ಟಿದ್ದನು.

ಈ ವಿಚಾರವನ್ನು ಉಡುಪಿ ಎಸ್ಪಿ ಡಾ| ಕೆ. ಅರುಣ್‌ ಅವರು, ಯೋಗೀಶ್‌ ಆಚಾರ್ಯ ಬಾಯ್ಬಿಟ್ಟಿರುವ ವಿಚಾರಗಳು, ಆರೋಪಿಗೆ ಸಂಬಂಧಿಸಿದ ಮಾಹಿತಿ ಗಳನ್ನು ಕಲೆ ಹಾಕಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಏಳು ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಯೋಗೀಶ್‌ ಆಚಾರ್ಯ ತಿಳಿಸಿದಂತೆ ರಾಜೇಶ್‌ ಆಚಾರ್ಯ ಮತ್ತು ಕಲಿ ಯೋಗೀಶ್‌ ಬಂಧನ ಬಾಕಿಯಿದೆ ಎಂದು  ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

19 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

19 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago