ಕಾಪು: ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.
ಶರತ್ ಶೆಟ್ಟಿ ಅವರು ಕಳೆದ ಭಾನುವಾರ ಪಾಂಗಾಳ ಪಡ್ಪುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು.
ಇನ್ನು ಶರತ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು, ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಶರತ್ ಶೆಟ್ಟಿ ಅವರ ಭಾವ ಚಂದ್ರಹಾಸ ಶೆಟ್ಟಿ ಮಂಡೇಡಿ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…