Featured

ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ : ದುಷ್ಕರ್ಮಿಗಳ ಪತ್ತೆಗೆ ದೈವದ ಮೊರೆ ಹೋದ ಕುಟುಂಬ – Vishwanews24

ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ : ದುಷ್ಕರ್ಮಿಗಳ ಪತ್ತೆಗೆ ದೈವದ ಮೊರೆ ಹೋದ ಕುಟುಂಬ

ಕಾಪು: ದುಷ್ಮರ್ಮಿಗಳಿಂದ ಹತ್ಯೆಗೊಳಗಾದ ಪಾಂಗಾಳ ಶರತ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಪೊಲೀಸರ ಕೈಗೆ ಸಿಲುಕಿಸುವಂತೆ ಶರತ್‌ ಶೆಟ್ಟಿ ಕುಟುಂಬದವರು ದೈವದ ಮೊರೆ ಹೋಗಿದ್ದಾರೆ.

ಶರತ್‌ ಶೆಟ್ಟಿ ಅವರು ಕಳೆದ ಭಾನುವಾರ ಪಾಂಗಾಳ ಪಡ್ಪುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದು, ಆ ವೇಳೆ ಮಾತುಕತೆಗೆಂದು ಕರೆದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು.

ಇನ್ನು ಶರತ್‌ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಉಡುಪಿ ಎಸ್ಪಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್‌ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದು, ಮಹತ್ವದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಶರತ್‌ ಶೆಟ್ಟಿ ಅವರ ಭಾವ ಚಂದ್ರಹಾಸ ಶೆಟ್ಟಿ ಮಂಡೇಡಿ ಅವರ ಮನೆಯಲ್ಲಿ ಶುಕ್ರವಾರ ರಾತ್ರಿ ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೇಮ ನಡೆದಿದ್ದು, ಅಲ್ಲಿ ಅವರು ತನ್ನ ಭಾವನ ಸಾವಿಗೆ ಕಾರಣರಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ದೈವ ಬಲವನ್ನು ಒದಗಿಸಿಕೊಟ್ಟು, ಅವರ ಬಂಧನವಾಗಿ ಕಠಿಣ ಶಿಕ್ಷೆ ದೊರಕುವಂತೆ ಅನುಗ್ರಹಿಸುವಂತೆ ಅವರು ದೈವದ ಮೊರೆ ಹೋಗಿದ್ದಾರೆ

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

51 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago