ಉಡುಪಿ : ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಮೊಗವೀರ ಸಮುದಾಯಕ್ಕೆ ಸೇರಿದ ಮೀನುಗಾರರ ಸಮುದಾಯದ ಆಡಳಿತ ಪಕ್ಷದ ಏಕೈಕ ಪ್ರತಿನಿಧಿಯಾದ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಇವರಿಗೆ ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮೊಗವೀರ ಹಿತಸಾಧನಾ ವೇದಿಕೆ ಉಚ್ಚಿಲ ಅವರು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಪ್ರಸ್ತುತ ಕರ್ನಾಟಕದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸರಕಾರವಿದೆ ಗಂಗಾಮತ ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದಲ್ಲಿ 80 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯ ಮೊಗವೀರ ಸಮುದಾಯ ಹಾಗಾಗಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಅನುಸರಿಸುತ್ತಿದೆ ಎಂಬ ಕೊರಗು ನಮ್ಮನ್ನು ಕಾಡುತ್ತಿದೆ ಎಂದರು.
ದೇಶದ ಎಲ್ಲ ರಾಜ್ಯಗಳಲ್ಲಿ ನಮ್ಮ ಸಮುದಾಯದ ಚುನಾಯಿತ ಜನಪ್ರತಿನಿಧಿಗಳು ಬೇರೆ ಬೇರೆ ಪಕ್ಷಗಳಿಂದ ಆಯ್ಕೆಯಾಗಿ ಆಯಾ ರಾಜ್ಯದ ಆಡಳಿತ ಪಕ್ಷಗಳ ಮೂಲಕ ಸಚಿವ ಸಂಪುಟದಲ್ಲಿ ಸೂಕ್ತಸ್ಥಾನಮಾನ ಸಿಕ್ಕಿರುತ್ತದೆ ಅಷ್ಟೇ ಅಲ್ಲದೆ ಕರ್ನಾಟಕದಲ್ಲೂ ಕೂಡ ಈ ಹಿಂದಿನ ಎಲ್ಲಾ ಸರಕಾರಗಳು ಮೀನುಗಾರರ ಸಮುದಾಯಕ್ಕೆ ಪ್ರಾತಿನಿಧಿತ್ವ ನೀಡುತ್ತ ಬಂದಿದ್ದಾರೆ ಆದರೆ ಬಿಜೆಪಿ ಮಾತ್ರ ನಮ್ಮ ಸಮುದಾಯಕ್ಕೆ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದು ಬಹಳ ಖೇದಕರವಾಗಿದೆ, ಕರ್ನಾಟಕ ವಿಧಾನಸಭಾ ಸದಸ್ಯರ ಪೈಕಿ ಆಡಳಿತ ಪಕ್ಷದ ಗಂಗಾಮತ ಸಮುದಾಯಕ್ಕೆ ಸೇರಿರುವ ವಿಧಾನಸಭಾ ಸದಸ್ಯರ ಸಂಖ್ಯೆ ಕೇವಲ ಒಂದು ಹಾಗಾಗಿ ನಮ್ಮ ಸಮುದಾಯದ ಬಗ್ಗೆ ಈ ರೀತಿಯ ಜಾಣ ಕುರುಡನ್ನು ಮೊಗವೀರ ಸಮಾಜ ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.
ಮೊಗವೀರ ಸಮುದಾಯಕ್ಕೆ ಸೇರಿರುವ ಕರ್ನಾಟಕದ ಏಕೈಕ ಶಾಸಕರಾದ ಭಾರತೀಯ ಜನತಾ ಪಕ್ಷದಿಂದ ಆರು ಬಾರಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿರುವ ಹಿರಿಯ ಅನುಭವಿ ಕಲಂಕರಹಿತ ರಾಜಕಾರಣಿಯಾಗಿರುವ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶ್ರೀ ಲಾಲಾಜಿ ಆರ್ ಮೆಂಡನ್ ಇವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕರ್ನಾಟಕದ ಸಮಸ್ತ ಮೊಗವೀರರ ಪರವಾಗಿ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ನವೀನ್ ಕುಮಾರ್ ಕಟೀಲ್ ಅವರನ್ನು ಹಾಗೂ ಬಿಜೆಪಿ ಪಕ್ಷದ ಹೈಕಮಾಂಡನ್ನು ಆಗ್ರಹಿಸುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಮೊಗವೀರ ಹಿತಸಾಧನಾ ವೇದಿಕೆ ಇದರ ಅಧ್ಯಕ್ಷರಾದ ಪುಷ್ಪರಾಜ ಕೋಟ್ಯನ್,ಡಾ. ದೇವಿಪ್ರಸಾದ್ ಹೆಜಮಾಡಿ ರಾಜ್ಯಧ್ಯಕ್ಷರು ರಾಷ್ಟ್ರೀಯ ಮೀನುಗಾರರ ಸಂಘ, ದಾಮೋದರ ಸುವರ್ಣ ಹದಿನಾರು ಪಟ್ಣ ಮೊಗವೀರ ಮಹಾಸಭಾ ಅಧ್ಯಕ್ಷರು, ಮನೋಜ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…