Featured

ಕಾಪು ಶಾಸಕ ಸುರೇಶ್ ಶೆಟ್ಟಿ ವಿರುದ್ಧ ಮತ್ತೆ ಕಿಡಿಕಾರಿದ ಸೊರಕೆ : vishwanews24

ಕಾಪು ಶಾಸಕ ಸುರೇಶ್ ಶೆಟ್ಟಿ ವಿರುದ್ಧ ಮತ್ತೆ ಕಿಡಿಕಾರಿದ ಸೊರಕೆ :vishwanews24

ಅರವತ್ತೊಂಭತ್ತು ಸಾವಿರ ಜನ ನನಗೂ ಮತ ಹಾಕಿದ್ದಾರೆ ಅವರ ಸೇವೆ ನನ್ನ ಕರ್ತವ್ಯ

ಹಕ್ಕುಚ್ಯುತಿಯ ಬೆದರಿಕೆ ನಾನು ಬಗ್ಗುವುದಿಲ್ಲ : ಸೊರಕೆ

ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ ಆದರೆ ಅರವತ್ತೊಂಭತ್ತು ಸಾವಿರ ಮತ ಹಾಕಿದ ಜನರ ಸೇವೆ ಮಾಡಿದರೆ ಇದು ಹಕ್ಕುಚ್ಯುತಿ ಎಂದು ವಾದ ಮಂಡಿಸುವ ಶಾಸಕರ ವಿರುಧ್ಧ ಅಸಾಮಾಧಾನವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ‌ ಹೇಳಿದ್ದಾರೆ.

ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ, ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವ,ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ ನಮಗೆ ದಾರಿ ತೋರಿಸಿ ಕೊಟ್ಟಿದ್ದರು,ಅವರು ನೀಡಿದ ಅವಕಾಶವನ್ನು ಬಳಸಿಕೊಂಡು ನಾವು ಕೂಡಾ ಪ್ರತಿಭಟನೆ ನಡೆಸಿದ್ದೇವೆ. ಜನರ ಮುಂದೆ ಸತ್ಯದರ್ಶನ ಮಾಡಿಸಿಕೊಟ್ಟಿದ್ದೇವೆ ಎಂದರು.

ನಾನು ಯಾವಾತ್ತಿಗೂ ಶಾಸಕರ ಮಗನ ವಿಚಾರ ಉಲ್ಲೇಖ ಮಾಡಿಲ್ಲ ಹಾಗಂತ ಲೈಸನ್ಸ್ ಇದ್ದವರೆ ಕಾಂಟ್ಯಾಕ್ಟ್ ಕೆಲಸ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಕಾಪು ಹೊಸಮಾರಿಗುಡಿ ವಿಚಾರದಲ್ಲಿ ನಾನು ಕೂಡ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಸಂಬಂಧ ಪಟ್ಟ ಎಲ್ಲಾ ಸಚಿವರಿಗೆ ,ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ,ನಮ್ದು ಆಂತರಿಕ ಒಳಜಗಲದಿಂದ ಇದೆಲ್ಲ ಆಗಿದೆ ಎಂದಾದರೇ ನಮ್ಮ ನಿಯೋಗದ ಜತೆ ಬಂದ ಅವರದೇ ಸಮಾಜದ ನಾಯಕನಿಗೆ ಶಾಸಕರು ಕರೆ ಮಾತಾಡಿರುವುದು ಯಾಕೆ ಎಂದು ಮರುಪ್ರಶ್ನೆ ಮಾಡಿದರು.

ಕಾಪು ಶಾಸಕರು ರಾಜ್ಯ ಸರಕಾರವು ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಶಾಸಕರ ನಿಧಿ, ಅಲ್ಪಸಂಖ್ಯಾತರ ನಿಧಿ, ಲೋಕೋಪಯೋಗಿ ಇಲಾಖೆ ಸಹಿತ ಇತರ ಇಲಾಖೆಗಳ ಅನುದಾನ ಹಾಗೂ ತಾ.ಪಂ., ಜಿ. ಪಂ., ನಿಧಿಯೂ ಸಿಕ್ಕಿದೆ. ಆದರೂ ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಸೊರಕೆ ಮಾತಿನಲ್ಲಿ ಕುಟುಕಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್‌ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಜಿತೇಂದ್ರ ಪುರ್ಟಾಡೋ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್, ಶರ್ಪುದ್ದೀನ್ ಶೇಖ್ ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

4 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago