ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ ಆದರೆ ಅರವತ್ತೊಂಭತ್ತು ಸಾವಿರ ಮತ ಹಾಕಿದ ಜನರ ಸೇವೆ ಮಾಡಿದರೆ ಇದು ಹಕ್ಕುಚ್ಯುತಿ ಎಂದು ವಾದ ಮಂಡಿಸುವ ಶಾಸಕರ ವಿರುಧ್ಧ ಅಸಾಮಾಧಾನವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ, ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವ,ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ ನಮಗೆ ದಾರಿ ತೋರಿಸಿ ಕೊಟ್ಟಿದ್ದರು,ಅವರು ನೀಡಿದ ಅವಕಾಶವನ್ನು ಬಳಸಿಕೊಂಡು ನಾವು ಕೂಡಾ ಪ್ರತಿಭಟನೆ ನಡೆಸಿದ್ದೇವೆ. ಜನರ ಮುಂದೆ ಸತ್ಯದರ್ಶನ ಮಾಡಿಸಿಕೊಟ್ಟಿದ್ದೇವೆ ಎಂದರು.
ನಾನು ಯಾವಾತ್ತಿಗೂ ಶಾಸಕರ ಮಗನ ವಿಚಾರ ಉಲ್ಲೇಖ ಮಾಡಿಲ್ಲ ಹಾಗಂತ ಲೈಸನ್ಸ್ ಇದ್ದವರೆ ಕಾಂಟ್ಯಾಕ್ಟ್ ಕೆಲಸ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.
ಕಾಪು ಹೊಸಮಾರಿಗುಡಿ ವಿಚಾರದಲ್ಲಿ ನಾನು ಕೂಡ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಸಂಬಂಧ ಪಟ್ಟ ಎಲ್ಲಾ ಸಚಿವರಿಗೆ ,ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ,ನಮ್ದು ಆಂತರಿಕ ಒಳಜಗಲದಿಂದ ಇದೆಲ್ಲ ಆಗಿದೆ ಎಂದಾದರೇ ನಮ್ಮ ನಿಯೋಗದ ಜತೆ ಬಂದ ಅವರದೇ ಸಮಾಜದ ನಾಯಕನಿಗೆ ಶಾಸಕರು ಕರೆ ಮಾತಾಡಿರುವುದು ಯಾಕೆ ಎಂದು ಮರುಪ್ರಶ್ನೆ ಮಾಡಿದರು.
ಕಾಪು ಶಾಸಕರು ರಾಜ್ಯ ಸರಕಾರವು ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಶಾಸಕರ ನಿಧಿ, ಅಲ್ಪಸಂಖ್ಯಾತರ ನಿಧಿ, ಲೋಕೋಪಯೋಗಿ ಇಲಾಖೆ ಸಹಿತ ಇತರ ಇಲಾಖೆಗಳ ಅನುದಾನ ಹಾಗೂ ತಾ.ಪಂ., ಜಿ. ಪಂ., ನಿಧಿಯೂ ಸಿಕ್ಕಿದೆ. ಆದರೂ ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಸೊರಕೆ ಮಾತಿನಲ್ಲಿ ಕುಟುಕಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಜಿತೇಂದ್ರ ಪುರ್ಟಾಡೋ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್, ಶರ್ಪುದ್ದೀನ್ ಶೇಖ್ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…