ಕಾಪು : ಶಿರ್ವ ಪೇಟೆಯಲ್ಲಿ ಪಾದಯಾತ್ರೆ ಹಾಗೂ ಬಹಿರಂಗ ಸಭೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಭಾಗಿ – Vishwanews24
ಕಾಪು : ಶಿರ್ವ ಪೇಟೆಯಲ್ಲಿ ಪಾದಯಾತ್ರೆ ಹಾಗೂ ಬಹಿರಂಗ ಸಭೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವಾ ಶರ್ಮಾ ಭಾಗಿ
ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಪೇಟೆಯಲ್ಲಿ ನಡೆದ ಪಾದಯಾತ್ರೆ ಹಾಗೂ ಬಹಿರಂಗ ಸಭೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ, ಫೈರ್ ಬ್ರಾಂಡ್ ನಾಯಕ, ಹಿಮಾಂತ್ ಬಿಸ್ವಾ ಶರ್ಮಾ ಅವರು ಭಾಗಿಯಾದರು.
ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಉಡುಪಿ ವಿಧಾನ ಸಭಾ ಕ್ಷೇತ್ರ ದ ಶಾಸಕರಾದ ಶ್ರೀ ರಘುಪತಿ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಕೊಯಿಲಾಡಿ ಸುರೇಶ್ ನಾಯಕ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್, ಕಾಪು ಕ್ಷೇತ್ರ ಬಿಜೆಪಿ ಉಸ್ತುವಾರಿಗಳಾದ ಶ್ರೀ ವಿಜೇಂದ್ರ ಗುಪ್ತ, ಕರಾವಳಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನಾ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಬಿಜೆಪಿ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ಬಿಜೆಪಿ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.




