ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ ನಿಧನ :ತೀವ್ರ ಸಂತಾಪ : vishwanews24
ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಮನೆಗೆ ವಾಪಸ್ಸಾಗಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಶುಕ್ರವಾರ ಬೆಳಗ್ಗಿನ ಜಾವ ತೀವ್ರ ಅಸ್ವಸ್ಥತಗೊಂಡು ನಿಧನ ಹೊಂದಿದ್ದಾರೆ.
ಸಾಮಾಜಿಕ, ಧಾರ್ಮಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಮುಂದಾಳುತ್ವ ವಹಿಸಿಕೊಂಡು ಸೇವೆ ಸಲ್ಲಿಸುತ್ತಿದ್ದ ಅವರು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವಹಿಸಿದ್ದರು. ಕಾಪು ಸಿಎ ಬ್ಯಾಂಕ್ ಮಹಾಪ್ರಬಂಧಕರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದು ಬಳಿಕ ವಿಕಾಸ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯನ್ನು ಪ್ರಾರಂಭಿಸಿ, ಅದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ವಿಶ್ವಕರ್ಮ ಸಮಾಜದ ಮುಂಚೂಣಿಯ ನಾಯಕರಾಗಿದ್ದ ಅವರು ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿಯಲ್ಲಿ ವಿಶ್ವಕರ್ಮ ಸಮಾಜವನ್ನು ಪ್ರತಿನಿಧಿಸುತ್ತಿದ್ದರು. ಕಾಪು ಪರಿಸರದ ದೇವಸ್ಥಾನ, ದೈವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಲ್ಲೂ ಪೂರ್ಣ ಸಹಕಾರ ನೀಡುತ್ತಾ ಬಂದಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…