photo credit: Roopam Studio kaup
ವರದಿ: ಪುರುಷೋತ್ತಮ ಸಾಲಿಯಾನ್
ಕಾಪು: ಕಾಪು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಫೆ.13 ರಿಂದ 20 ರವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗುರುವಾರ ಧ್ವಜಾರೋಹಣ ಸಂಪನ್ನಗೊಂಡಿತು.
ದೇವಳದ ತಂತ್ರಿಗಳಾದ ವೇದಮೂರ್ತಿ ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಅನುಷ್ಠಾನಗಳೊಂದಿಗೆ ಬೆಳಗ್ಗೆ 9.30ರ ಮೀನ ಲಗ್ನದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಕ್ಷೇತ್ರದ ವರ್ಷಾವಧಿ ಮಹೋತ್ಸವದ ಪ್ರಯುಕ್ತ ಫೆ.18ರಂದು ಶ್ರೀ ಮನ್ಮಹಾರಥೋತ್ಸವ ಸಂಪನ್ನಗೊಳ್ಳಲಿದೆ.
ನಾನಾ ಧಾರ್ಮಿಕ ಅನುಷ್ಠಾನಗಳೊಂದಿಗೆ ಆ ದಿನ ಬೆಳಗ್ಗೆ 10.45 ರ ಮೇಷ ಲಗ್ನದಲ್ಲಿ ರಥಾವರೋಹಣ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ 8 ಗಂಟೆಗೆ ಶ್ರೀ ಮನ್ಮಹಾರಥೋತ್ಸವ ಬಳಿಕ, ಉತ್ಸವ ಬಲಿ, ಕಟ್ಟೆ ಪೂಜೆ, ಭೂತ ಬಲಿ, ಶಯನ ಸಹಿತ ಧಾರ್ಮಿಕ ಅನುಷ್ಠಾನಗಳೊಂದಿಗೆ ವರ್ಷಾವಧಿ ಉತ್ಸವ ಸಂಪನ್ನಗೊಳ್ಳಲಿದೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ಎಂ ಬಂಗೇರ, ಕಾರ್ಯನಿರ್ವಹಣಾಧಿಕಾರಿ ರವಿಶಂಕರ್ ಕೆ., ಪ್ರಮುಖರಾದ ಕೆ.ಪಿ.ಆಚಾರ್ಯ, ಕೆ.ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ್ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ವಿ. ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಲಕ್ಷ್ಮೀಶ್ ತಂತ್ರಿ ಮಾಳವಿಕಾ, ರತ್ನಾಕರ ಹೆಗ್ಡೆ ಕಲಿಲಬೀಡು, ಶ್ರೀಧರ ಶೆಣೈ, , ಲಕ್ಷ್ಮೀಕಾಂತ್ ಕೆ. ಆಡಳಿತ ಮಂಡಳಿಯ ಸದಸ್ಯರಾದ ನಾರಾಯಣ ತಂತ್ರಿ, ಸರೋಜಿನಿ ಜೆ ಶೆಟ್ಟಿ, ದೇವರಾಜ್ ಪಡು, ಉಮೇಶ್ ಪೂಜಾರಿ, ರಮಾ ವೈ. ಶೆಟ್ಟಿ, ಎಂ. ಕುಟ್ಟಿ ದೇವಸ್ಥಾನದ ಸಿಬಂದಿ ಮತ್ತು ಕಾಪು ಸೀಮೆಯ ಹತ್ತು ಸಮಸ್ತರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…