Featured

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ – vishwanews24

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್

ಕಾಪು :  ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಈ ಹಿಂದೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮೊಗವೀರ ಸಮುದಾಯದವರಿಗೆ ಅವಕಾಶ ನೀಡಲಾಗಿರುತ್ತದೆ. ಅದರಂತೆ, ಈ ಬಾರಿಯೂ ಪ್ರಸಕ್ತ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯದ ಶ್ರೀಧರ್ ಕಾಂಚನ್ ರವರನ್ನು ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಆದರೆ, ಅವರು ತೀರಾ ಅಸೌಖ್ಯದಿಂದಾಗಿ ಇತ್ತೀಚೆಗೆ ನಿಧನರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮೊಗವೀರ ಸಮುದಾಯದವರನ್ನೇ ನೇಮಕ ಮಾಡುವುದು ನ್ಯಾಯ ಸಮ್ಮತ ವಿಚಾರವಾಗಿರುತ್ತದೆ.

ಆದರೆ, ಕೆಲವೊಂದು ಕಾಣದ ಕೈಗಳು ತಮ್ಮ ಒಣ ಪ್ರತಿಷ್ಠೆಗೋಸ್ಕರ ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಂಡು, ಸಾರ್ವಜನಿಕರಿಗೆ ಯಾವುದೇ ಮಾಹಿತಿ ಅಥವಾ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವವನ್ನು ಭರ್ತಿ ಮಾಡುವ ಬಗ್ಗೆ ಸಾರ್ವಜನಿಕರ ಅವಗಾಹನೆಗೆ ತರದೇ ತರಾತುರಿಯಲ್ಲಿ, ಪ್ರಬಲ ಮೊಗವೀರ ಸಮುದಾಯವನ್ನು ಕಡೆಗಣಿಸಿ ಬೇರೊಬ್ಬರನ್ನು ನೇಮಕ ಮಾಡಿರುವುದು ನ್ಯಾಯ ಸಮ್ಮತವಲ್ಲ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ.) ಯ ಅಧ್ಯಕ್ಷರಾದ ವೈ. ಸುಕುಮಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಸೇರಲ್ಪಟ್ಟಿರುವ, ಸರ್ಕಾರದ ಆಸ್ತಿಯಾಗಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಸಮಾಜದ ಎಲ್ಲಾ ವರ್ಗದ ಮತ್ತು ಜಾತಿಯ ಭಕ್ತಾದಿಗಳು ಶ್ರದ್ದೆ, ಭಕ್ತಿಯಿಂದ ಆರಾಧಿಸಿಕೊಂಡು ಬಂದಿರುವ ಧಾರ್ಮಿಕ ಕೇಂದ್ರವಾಗಿದೆ.
ಇಲ್ಲಿ ಅಧಿಕಾರ ಮುಖ್ಯವಲ್ಲ, ಬರುವ ಭಕ್ತಾದಿಗಳ ಶ್ರೇಯಸ್ಸು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರದ ಸಂದರ್ಭದಲ್ಲಿ, ಈ ಭಾಗದಲ್ಲಿ ಇತರೆ ದೊಡ್ಡ ಸಮುದಾಯಗಳಂತೆ, ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಮೊಗವೀರ ಸಮುದಾಯದವರು ತಮ್ಮನ್ನು ಮಾತೆ ಮಾರಿಯಮ್ಮನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಜೊತೆಗೆ, ಅಪಾರ ಪ್ರಮಾಣದಲ್ಲಿ ದೇಣಿಗೆಯನ್ನು ಕೂಡಾ ನೀಡಿರುವುದು ಸತ್ಯ ವಿಚಾರವಾಗಿರುತ್ತದೆ.

ಆದ್ದರಿಂದ, ಅಧಿಕಾರಕ್ಕೋಸ್ಕರ ಒಂದು ದೊಡ್ಡ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿ, ಸಾರ್ವಜನಿಕ ರಲ್ಲಿ ಚರ್ಚೆ ನಡೆಯುತ್ತಿರುವುದು ಅತ್ಯಂತ ವಿಷಾದಣೀಯ ಸಂಗತಿಯಾಗಿರುತ್ತದೆ.

ಆದ್ದರಿಂದ, ನ್ಯಾಯಯುತವಾಗಿ ಮೊಗವೀರ ಸಮುದಾಯದ ವ್ಯಕ್ತಿಯನ್ನು ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡುವಂತೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯು ಆಗ್ರಹಿಸುವುದರೊಂದಿಗೆ, ಸಂಪೂರ್ಣ ಬೆಂಬಲ ನೀಡಲು ಸಿದ್ಧರಿದ್ದೇವೆ ಎಂದು ವೈ. ಸುಕುಮಾರ್ ರವರು ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago