Featured

ಕಾಪು ಶ್ರೀ ಹೊಸ ಮಾರಿಗುಡಿ : ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ  ರೂ. ದೇಣಿಗೆ – vishwanews24

ಕಾಪು ಶ್ರೀ ಹೊಸ ಮಾರಿಗುಡಿ : ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ  ರೂ. ದೇಣಿಗೆ

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್‌ ಕುಮಾರ್‌, ಜಿ. ಪಂ. ಸಿಇಒ ಪ್ರತೀಕ್‌ ಬಾಯಲ್‌ ಭೇಟಿ

ಕಾಪು: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್‌ ಕುಮಾರ್‌, ಜಿ. ಪಂ. ಸಿಇಒ ಪ್ರತೀಕ್‌ ಬಾಯಲ್‌ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ರವಿಸುಂದರ್‌ ಶೆಟ್ಟಿ ಸರ್ವ ವಿವರಣೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, 2019ರಲ್ಲಿ ಜೀರ್ಣೋದ್ಧಾರ ಕಾಮಗಾರಿಗೆ ವೇಗ ದೊರಕುವಾಗ ಅಪರ ಜಿಲ್ಲಾಧಿಕಾರಿಯಾಗಿದ್ದು, ಈಗ ಬ್ರಹ್ಮಕಲಶೋತ್ಸವ ಸಂದರ್ಭ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕಿದೆ. ಭಕ್ತರೆಲ್ಲರ ದೇಣಿಗೆಯೊಂದಿಗೆ ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಗಳು ಅದ್ಭುತವಾಗಿ ಮೂಡಿ ಬಂದಿದೆ. ಭಕ್ತರ ಅನುಕೂಲಕ್ಕಾಗಿ ವಿವಿಧ ವ್ಯವಸ್ಥೆಗಳನ್ನು ಜೋಡಿಸಲಾಗಿದ್ದು ಎಲ್ಲವೂ ಸುಸೂತ್ರವಾಗಿದೆ ಎಂದರು.

ಅದಾನಿ ಸಂಸ್ಥೆಯಿಂದ ದೇಣಿಗೆ
ಐತಿಹಾಸಿಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂರಕವಾಗಿ ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಮಂಜೂರಾತಿ ಪತ್ರವನ್ನು ಅದಾನಿ ಸಮೂಹದ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಅವರು ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರ ಮೂಲಕವಾಗಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಉಪಾಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಅವರು ಅದಾನಿ ಸಂಸ್ಥೆಯ ಸಿಎಸ್‌ಆರ್‌ ನಿಧಿಯಿಂದಲೇ 3.50 ಕೋ. ರೂ. ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಆಗ್ರಹಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ, ಗೌರವಾಧ್ಯಕ್ಷರಾದ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಪ್ರಮುಖರಾದ ರಮೇಶ್‌ ಹೆಗ್ಡೆ ಕಲ್ಯ, ಉದಯ್‌ ಸುಂದರ್‌ ಶೆಟ್ಟಿ, ಭಗವಾನ್‌ದಾಸ್‌ ಶೆಟ್ಟಿಗಾರ್‌, ಯೋಗೀಶ್‌ ವಿ. ಶೆಟ್ಟಿ, ಬೀನಾ ವಿ. ಶೆಟ್ಟಿ, ಸೂರ್ಯಕಾಂತ್‌ ಜಯ ಸುವರ್ಣ, ಸದಾಶಿವ ಕರ್ಕೇರ, ಹರೀಶ್‌ ಶೆಟ್ಟಿ ಎರ್ಮಾಳು, ದೇವಸ್ಥಾನದ ಟ್ರಸ್ಟಿಗಳು, ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago