ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್ ಕುಮಾರ್, ಜಿ. ಪಂ. ಸಿಇಒ ಪ್ರತೀಕ್ ಬಾಯಲ್ ಭೇಟಿ
ಕಾಪು: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್ ಕುಮಾರ್, ಜಿ. ಪಂ. ಸಿಇಒ ಪ್ರತೀಕ್ ಬಾಯಲ್ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ರವಿಸುಂದರ್ ಶೆಟ್ಟಿ ಸರ್ವ ವಿವರಣೆಗಳನ್ನು ನೀಡಿದರು.
ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, 2019ರಲ್ಲಿ ಜೀರ್ಣೋದ್ಧಾರ ಕಾಮಗಾರಿಗೆ ವೇಗ ದೊರಕುವಾಗ ಅಪರ ಜಿಲ್ಲಾಧಿಕಾರಿಯಾಗಿದ್ದು, ಈಗ ಬ್ರಹ್ಮಕಲಶೋತ್ಸವ ಸಂದರ್ಭ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕಿದೆ. ಭಕ್ತರೆಲ್ಲರ ದೇಣಿಗೆಯೊಂದಿಗೆ ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಗಳು ಅದ್ಭುತವಾಗಿ ಮೂಡಿ ಬಂದಿದೆ. ಭಕ್ತರ ಅನುಕೂಲಕ್ಕಾಗಿ ವಿವಿಧ ವ್ಯವಸ್ಥೆಗಳನ್ನು ಜೋಡಿಸಲಾಗಿದ್ದು ಎಲ್ಲವೂ ಸುಸೂತ್ರವಾಗಿದೆ ಎಂದರು.
ಅದಾನಿ ಸಂಸ್ಥೆಯಿಂದ ದೇಣಿಗೆ
ಐತಿಹಾಸಿಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂರಕವಾಗಿ ಅದಾನಿ ಫೌಡೇಷನ್ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಮಂಜೂರಾತಿ ಪತ್ರವನ್ನು ಅದಾನಿ ಸಮೂಹದ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಅವರು ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರ ಮೂಲಕವಾಗಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಉಪಾಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಅದಾನಿ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದಲೇ 3.50 ಕೋ. ರೂ. ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಆಗ್ರಹಿಸಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷರಾದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ರಮೇಶ್ ಹೆಗ್ಡೆ ಕಲ್ಯ, ಉದಯ್ ಸುಂದರ್ ಶೆಟ್ಟಿ, ಭಗವಾನ್‌ದಾಸ್ ಶೆಟ್ಟಿಗಾರ್, ಯೋಗೀಶ್ ವಿ. ಶೆಟ್ಟಿ, ಬೀನಾ ವಿ. ಶೆಟ್ಟಿ, ಸೂರ್ಯಕಾಂತ್ ಜಯ ಸುವರ್ಣ, ಸದಾಶಿವ ಕರ್ಕೇರ, ಹರೀಶ್ ಶೆಟ್ಟಿ ಎರ್ಮಾಳು, ದೇವಸ್ಥಾನದ ಟ್ರಸ್ಟಿಗಳು, ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…