Featured

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆ. 22ರಂದು ದ.ಕ. ಮತ್ತು ಫೆ. 23ರಂದು ಉಡುಪಿಯಿಂದ ಹೊರೆಕಾಣಿಕೆ ಸಮರ್ಪಣೆ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆ. 22ರಂದು ದ.ಕ. ಮತ್ತು ಫೆ. 23ರಂದು ಉಡುಪಿಯಿಂದ ಹೊರೆಕಾಣಿಕೆ ಸಮರ್ಪಣೆ

ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುವ ಮಹಾಅನ್ನಸಂತರ್ಪಣೆಗೆ ಪೂರ್ವಭಾವಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತವಾಗಿ ವಿವಿಧೆಡೆಗಳಿಂದ ಬೃಹತ್‌ ಹಸುರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಲಿದೆ.

ಫೆ. 22ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮರ್ಪಿಸಲ್ಪಡುವ ದಕ್ಷಿಣ ವಾಹಿನಿ ಹೊರೆಕಾಣಿಕೆ ಸಮರ್ಪಣೆಯು ರಾ. ಹೆ. 66ರ ಮೂಳೂರು – ಕೊಪ್ಪಲಂಗಡಿ ಬಳಿಯಿಂದ ಹಾಗೂ ಫೆ. 23ರಂದು ಉಡುಪಿ ಜಿಲ್ಲೆಯಿಂದ ಸಮರ್ಪಿಸಲ್ಪಡುವ ಉತ್ತರ ವಾಹಿನಿ ಹೊರೆಕಾಣಿಕೆಯು ರಾ. ಹೆ. 66ರ ಪಾಂಗಾಳ ಸೇತುವೆ ಬಳಿಯಿಂದ ಹೊರಟು ಮಾರಿಗುಡಿಯನ್ನು ತಲುಪಲಿದೆ. ಈ ಸಂದರ್ಭ ವಿವಿಧ ಬಿರುದಾವಳಿಗಳೊಂದಿಗೆ ಬೃಹತ್‌ ಶೋಭಾಯಾತ್ರೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮರ್ಪಣೆ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳು ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಹೊರೆ ಕಾಣಿಕೆ ಸಂಗ್ರಹ ಮತ್ತು ಸಮರ್ಪಣೆಗಾಗಿ ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಸಂಸದರು, ಶಾಸಕರು ಸಹಿತ ಎಲ್ಲ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸಹಕಾರಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್‌ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

4 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

4 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

5 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

5 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago