ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುವ ಮಹಾಅನ್ನಸಂತರ್ಪಣೆಗೆ ಪೂರ್ವಭಾವಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತವಾಗಿ ವಿವಿಧೆಡೆಗಳಿಂದ ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಲಿದೆ.
ಫೆ. 22ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮರ್ಪಿಸಲ್ಪಡುವ ದಕ್ಷಿಣ ವಾಹಿನಿ ಹೊರೆಕಾಣಿಕೆ ಸಮರ್ಪಣೆಯು ರಾ. ಹೆ. 66ರ ಮೂಳೂರು – ಕೊಪ್ಪಲಂಗಡಿ ಬಳಿಯಿಂದ ಹಾಗೂ ಫೆ. 23ರಂದು ಉಡುಪಿ ಜಿಲ್ಲೆಯಿಂದ ಸಮರ್ಪಿಸಲ್ಪಡುವ ಉತ್ತರ ವಾಹಿನಿ ಹೊರೆಕಾಣಿಕೆಯು ರಾ. ಹೆ. 66ರ ಪಾಂಗಾಳ ಸೇತುವೆ ಬಳಿಯಿಂದ ಹೊರಟು ಮಾರಿಗುಡಿಯನ್ನು ತಲುಪಲಿದೆ. ಈ ಸಂದರ್ಭ ವಿವಿಧ ಬಿರುದಾವಳಿಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮರ್ಪಣೆ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳು ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಹೊರೆ ಕಾಣಿಕೆ ಸಂಗ್ರಹ ಮತ್ತು ಸಮರ್ಪಣೆಗಾಗಿ ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಸಂಸದರು, ಶಾಸಕರು ಸಹಿತ ಎಲ್ಲ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸಹಕಾರಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…