Featured

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ  -vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ

ಕಾಪು : ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದ ಅವರು, ದೇವಸ್ಥಾನದ ವತಿಯಿಂದ ಆಯೋಜಿಸಲಾಗಿರುವ ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ ಎಂಬ ವಿಶಿಷ್ಟ ಧಾರ್ಮಿಕ ಅಭಿಯಾನದಲ್ಲಿ ಭಾಗವಹಿಸಿದರು. ನವದುರ್ಗಾ ಲೇಖನವನ್ನು ಭಕ್ತಿಭಾವದಿಂದ ಬರೆದು ಕಾಪುವಿನ ಅಮ್ಮನಿಗೆ ಅಕ್ಷರ ನಮನವನ್ನು ಸಲ್ಲಿಸಿದರು, ಮುಂದಿನ ಒಂದು ತಿಂಗಳ ಒಳಗಾಗಿ ಪುಸ್ತಕವನ್ನು ಬರೆದು ಶಾಶ್ವತ ಸೇವೆಯೊಂದಿಗೆ ಕ್ಷೇತ್ರಕ್ಕೆ ಸಮರ್ಪಿಸುತ್ತೇನೆ ಎಂದರು.

ಬಿಗ್‌ಬಾಸ್ ಕಾರ್ಯಕ್ರಮದ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಅನುಷಾ ರೈ ಅವರು, ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನದೊಂದಿಗೆ ನವದುರ್ಗಾ ಲೇಖನ ಯಜ್ಞದಲ್ಲಿಯೂ ಪಾಲ್ಗೊಂಡಿರುವುದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ : ದೇವಸ್ಥಾನದಲ್ಲಿ ಮಹಿಳೆಯ ಕರಿಮಣಿ ಸರ ಕಳವು ಪ್ರಕರಣ ; ನಾಲ್ವರು ಮಹಿಳೆಯರ ಸಹಿತ ಐವರ ಬಂಧನ -vishwanews24

ಕುಂದಾಪುರ : ದೇವಸ್ಥಾನದಲ್ಲಿ ಮಹಿಳೆಯ ಕರಿಮಣಿ ಸರ ಕಳವು ಪ್ರಕರಣ ; ನಾಲ್ವರು ಮಹಿಳೆಯರ ಸಹಿತ ಐವರ ಬಂಧನ ಕುಂದಾಪುರ:…

5 hours ago

ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ -vishwanews24

ಸೌಜನ್ಯಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳೇ ನಮಗೆ ನ್ಯಾಯ ಕೊಡಿಸಬೇಕು : ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹ ಮಂಗಳೂರು : ಸೌಜನ್ಯಾ ಪ್ರಕರಣದಲ್ಲಿ…

5 hours ago

ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ -vishwanews24

ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು ; ತಾಳ್ಮೆಯಿಂದ ಹೋರಾಟ ವಾಪಸ್ ತೆಗೆದುಕೊಳ್ಳಿ : ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ ಬೆಂಗಳೂರು:…

7 hours ago

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ : ಡಿ.1ರಿಂದ ದೇಶಾದ್ಯಂತ ಬಿಜೆಪಿಯ ‘ಸೇವಾ ದೂತ’ ಅಭಿಯಾನ -vishwanews24

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ – ಡಿ.1ರಿಂದ ದೇಶಾದ್ಯಂತ ಬಿಜೆಪಿಯ 'ಸೇವಾ ದೂತ’ ಅಭಿಯಾನ ನವದೆಹಲಿ: ಪ್ರಧಾನಿ ನರೇಂದ್ರ…

7 hours ago

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ -vishwanews24

ನ. 27ರಿಂದ 29ರವರೆಗೆ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಉಡುಪಿ : ಕಾರ್ಕಳ ಶ್ರೀವೆಂಕಟರಮಣ…

7 hours ago

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ -vishwanews24

ಉಡುಪಿ : ಅಕ್ರಮವಾಗಿ ನೆಲೆಸಿದ್ದ 10  ಬಾಂಗ್ಲಾ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಚಾಲನೆ ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ…

9 hours ago