Featured

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ  ಮತ್ತು  ಕೊರಗಜ್ಜ ದೈವಸ್ಥಾನಕ್ಕೆ ನಟಿ ಪ್ರೇಮಾ ಭೇಟಿ – Vishwanews24

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ  ಮತ್ತು  ಕೊರಗಜ್ಜ ದೈವಸ್ಥಾನಕ್ಕೆ ನಟಿ ಪ್ರೇಮಾ ಭೇಟಿ

ಕಾಪು: ತೆಲುಗು ಮತ್ತು ಕನ್ನಡ ಚಲನಚಿತ್ರ ನಟಿ ಪ್ರೇಮಾ ಅವರು ಮಂಗಳವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾರಣಿಕದ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾರಿಗುಡಿ ದೇವಸ್ಥಾನದ ಐತಿಹ್ಯ, ನವೀಕರಣ ಕಾರ್ಯ, ಶಿಲಾ ಸೇವೆ ಸಮರ್ಪಣೆ ಸಹಿತ ವಿವಿಧ ಮಾಹಿತಿ ನೀಡಿದರು. ತಂತ್ರಿ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ ದೇವರ ಪ್ರಸಾದ ನೀಡಿದರು.

ಬಳಿಕ ಮಾಧ್ಯಮದೊಂದಿಗೆ ನಟಿ ಪ್ರೇಮಾ ಮಾತನಾಡಿ, ಅಮ್ಮನ ಅನುಗ್ರಹದಿಂದ ಇಲ್ಲಿಗೆ ಬಂದಿರುವೆ. ಮಾರಿಯಮ್ಮನ ದರ್ಶನ ಪಡೆದು ಸಂತೋಷವಾಗಿದೆ. ಕರಾವಳಿ ಜಿಲ್ಲೆಗಳು ದೇವಸ್ಥಾನಗಳ ತವರೂರು ಎಂದು ತಿಳಿದಿದ್ದೇನೆ. ದಿನವಿಡೀ ಬೇರೆ ಬೇರೆ ದೇವಸ್ಥಾನಗಳಿಗೆ ತೆರಳಿದಾಗಲೇ ಇಲ್ಲಿನ ಧಾರ್ಮಿಕ ಕ್ಷೇತ್ರಗಳ ಬಗ್ಗೆ ತಿಳಿಯುವಂತಾಗಿದೆ. ಅಮ್ಮನ ಅನುಗ್ರಹದಂತೆ ಮುನ್ನಡೆಯುತ್ತೇನೆ. ಜೀರ್ಣೋದ್ಧಾರ ಕಾರ್ಯದಲ್ಲೂ ತನ್ನಿಂದಾದಷ್ಟು ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಸದಸ್ಯರಾದ ಜಗದೀಶ್ ಬಂಗೇರ, ಚಂದ್ರಶೇಖರ್ ಅಮೀನ್, ಬಾಬು ಮಲ್ಲಾರು, ಅಭಿವೃದ್ಧಿ ಸಮಿತಿ ಪ್ರಚಾರ ಸಮಿತಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಪ್ರಬಂಧಕ ಗೋವರ್ಧನ್ ಕಾಪು, ರಾಧಿಕಾ ಭಟ್, ಭಾರತಿ ಟಿ.ಕೆ. ಮೊದಲಾದವರು ಉಪಸ್ಥಿತರಿದ್ದರು.

ಕೊರಗಜ್ಜ ಸನ್ನಿಧಿಗೆ ಭೇಟಿ : ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿದ ಅವರು, ಕೊರಗಜ್ಜ ದೈವದ ಬಗ್ಗೆ ಕೇಳಿ ತಿಳಿದಿದ್ದೇನೆ. ಆದರೆ ಪ್ರಥಮ ಬಾರಿಗೆ ಸನ್ನಿಧಾನಕ್ಕೆ ಭೇಟಿ ನೀಡುತ್ತಿದ್ದೇನೆ. ನನ್ನ ಮನಸ್ಸಿನ ಬೇಡಿಕೆಯನ್ನು ಅಜ್ಜನ ಬಳಿ ಹೇಳಿಕೊಂಡಿದ್ದೇನೆ. ಅಜ್ಜನ ಅನುಗ್ರಹದಿಂದ ಎಲ್ಲವೂ ಸುಸೂತ್ರವಾಗಿ ಈಡೇರುವ ಭರವಸೆಯಿದೆ ಎಂದರು. ಕೊರಗಜ್ಜ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರನ್ನು ಕ್ಷೇತ್ರದ ಮುಖ್ಯಸ್ಥ ಸುರೇಶ್ ಪಿ. ಅವರು ಅಜ್ಜನ ಪ್ರಸಾದ ನೀಡಿ ಗೌರವಿಸಿದರು. ನಟಿ ಅನು ಅಯ್ಯಪ್ಪ, ರತ್ನಾ ಸುರೇಶ್, ನಟಿಯರಾದ ರಾಧಿಕಾ ಭಟ್, ಭಾರತಿ ಟಿ.ಕೆ. ಮೊದಲಾದವರು ಉಪಸ್ಥಿತರಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

59 minutes ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

2 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

3 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

3 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

3 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

3 hours ago