Featured

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಇಂದು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಮುಖಂಡತ್ವದಲ್ಲಿ ಕುಂಕುಮ ಪ್ರಸಾದ ಮುಹೂರ್ತ ನೆರವೇರಿತು.

ನವದುರ್ಗಾ ಲೇಖನವನ್ನು ಬರೆದು ಅರ್ಪಿಸಿ, ನವಚಂಡೀಯಾಗದ ದಿನದಂದು ಸಂಕಲ್ಪದಲ್ಲಿ ಭಾಗಿಯಾಗಲಿರುವ ಭಕ್ತರಿಗೆ ನೀಡುವ ಕುಂಕುಮವನ್ನು ಮಾರಿಯಮ್ಮನಿಗೆ ಅರ್ಪಿಸಿ ಬ್ರಾಹ್ಮಣ ಸಂಘದ ಮಹಿಳೆಯರು ನಿರಂತರ ಲಕ್ಷ್ಮಿ ಶೋಭಾನೆಯೊಂದಿಗೆ ಕುಂಕುಮ ಪ್ರಸಾದವನ್ನು ಪ್ಯಾಕೆಟ್ ಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷರಾದ ಬೀನಾ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago