Featured

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ರಾಘವೇಂದ್ರ ರಾಜ್‍ಕುಮಾರ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ರಾಘವೇಂದ್ರ ರಾಜ್‍ಕುಮಾರ್ ಭೇಟಿ
ಕಾಪು : ಪುನರುತ್ಥಾನ – ಜೀರ್ಣೋದ್ಧಾರದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಚಲನಚಿತ್ರ ನಟ ಮತ್ತು ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರು ಪತ್ನಿ ಮಂಗಳಾ ಅವರ ಸಮೇತವಾಗಿ ಭೇಟಿ ನೀಡಿ, ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಅವರು 14 ವರ್ಷಗಳ ಬಳಿಕ ನನಗೆ ಅಮ್ಮನ ಮನೆ ಎಂಬ ಚಿತ್ರದಲ್ಲಿ ನಟಿಸುವ ಅವಕಾಶ ಲಭಿಸಿದೆ. ಈ ಸಂದರ್ಭದಲ್ಲೇ ಕಾಪು ಮಾರಿಯಮ್ಮನ ಸನ್ನಿಧಿಗೆ ಬರಲೂ ಕೂಡಾ ಸಾಧ್ಯವಾಗಿದೆ. ಅನಾರೋಗ್ಯಕ್ಕೆ ಗುರಿಯಾಗಿ ನನ್ನ ಜೀವನವೇ ಮುಗಿಯಿತು ಎಂಬ ಹಂತದಲ್ಲಿರುವಾಗ ತಾಯಿಯೇ ನನ್ನನ್ನು ಆಶೀರ್ವದಿಸಿ ಮೇಲಕ್ಕೆತ್ತಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧ್ದಾರದ ನೀಲಿ ನಕ್ಷೆಯನ್ನು ವೀಕ್ಷಿಸಿ, ಮಾಹಿತಿ ಪಡೆದುಕೊಂಡ ಅವರು ಮಾರಿಯಮ್ಮ ಸನ್ನಿಧಿಯು ಅತೀ ಶೀಘ್ರದಲ್ಲಿ ಉತ್ತಮ ಪವಾಢ ಹೊಂದಿದ ಕ್ಷೇತ್ರವಾಗಿ ಮೂಡಿ ಬರಲಿ. ಅದಕ್ಕಾಗಿ ನಮ್ಮ ಕುಟುಂಬ ಮತ್ತು ಅಭಿಮಾನಿಗಳ ಪರವಾಗಿಯೂ 99 ಶಿಲಾ ಸೇವೆಯ ಪ್ರತೀಕವಾಗಿ 99,999 ರೂ. ಹಣವನ್ನು ದೇಣಿಗೆ ರೂಪದಲ್ಲಿ ನೀಡುವುದಾಗಿ ಹೇಳಿ, ಅಭಿವೃದ್ಧಿ ಸಮಿತಿಗೆ ಶಿಲಾ ಕಾಣಿಕೆಯ ದೇಣಿಗೆಯನ್ನು ಹಸ್ತಾಂತರಿಸಿದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ರಾಘವೇಂದ್ರ ರಾಜ್ ಕುಮಾರ್ ಅವರು ಅನಾರೋಗ್ಯಕ್ಕೆ ಗುರಿಯಾಗಿದ್ದ ಸಂದರ್ಭ ನೀಡಿರುವ ಸಲಹೆಯಂತೆ ಕೊಲ್ಲೂರು ಮೂಕಾಂಭಿಕೆ ಮತ್ತು ಕಾಪು ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದಾರೆ. ಕಾಪುದಪ್ಪೆ ಮಾರಿಯಮ್ಮ ಕಷ್ಟದಲ್ಲಿರುವ ತನ್ನ ಭಕ್ತರನ್ನು ತನ್ನಲ್ಲಿಗೆ ಕರೆಯಿಸಿಕೊಂಡು ಅವರ ಇಷ್ಟಾರ್ಥಗಳನ್ನು ನೆರವೇರಿಸುತ್ತಾಳೆ ಎನ್ನುವುದಕ್ಕೆ ಇದೂ ಒಂದು ಉದಾಹರಣೆಯಾಗಿದೆ ಎಂದರು.
ಕಾಪು ಹೊಸ ಮಾರಿಗುಡಿಯ ಅರ್ಚಕರಾದ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಜೀರ್ಣೊದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾ„ಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಅನಿವಾಸಿ ಭಾರತೀಯ ಉದ್ಯಮಿ ಭೂಪತಿ ಶೆಟ್ಟಿ ಅಬುದಾಬಿ, ಪ್ರಿಯಾಂಕಾ ಸುನೀಲ್ ಕುಮಾರ್ ಕಾರ್ಕಳ, ಸಮಿತಿ ಪದಾ„ಕಾರಿಗಳಾದ ಕಾಪು ದಿವಾಕರ ಶೆಟ್ಟಿ, ಹರೀಶ್ ನಾಯಕ್, ಪ್ರಭಾತ್ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಆಚಾರ್ಯ, ಬೀನಾ ವಿ. ಶೆಟ್ಟಿ, ಶ್ರೀಧರ ತಂತ್ರಿ ಕಲ್ಯ, ಮಾರಿಗುಡಿಯ ಪಾತ್ರಿ ಗುರುಮೂರ್ತಿ, ದೇಗುಲದ ಪ್ರಬಂಧಕ ಗೋವರ್ಧನ ಶೇರಿಗಾರ್, ಲಕ್ಷ್ಮಣ್ ಶೆಟ್ಟಿ, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.
ವರದಿ:  ಪುರುಷೋತ್ತಮ ಸಾಲ್ಯಾನ್ ಮೂಳೂರು: 9343846360

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago