ಕಾಪು: ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ ನೂತನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶನಿವಾರ ನವದುರ್ಗಾ ಮಂಟಪದಲ್ಲಿ ಗಣಹೋಮ, ಲಕ್ಷ್ಮೀ ಪೂಜೆ, ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಳಿಗ್ಗೆ ನೆರವೇರಿತು. ಹೊಸ ಮಾರಿಗುಡಿಯ ಕಚೇರಿ, ಉಗ್ರಾಣ ಮುಹೂರ್ತ, ರಾಜಗೋಪುರ, ನವದುರ್ಗಾ ಮಂಟಪ ಉದ್ಘಾಟನೆಯೂ ನೆರವೇರಿತು.
ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು.
ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ಶ್ರೀಮತಿ ಬೀನಾ ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯರಾದ ವಿಜಯಲಕ್ಷ್ಮೀ ಶೆಟ್ಟಿ, ಮಾಧವ ಪಾಲನ್, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಮುಂಬಯಿ ಸಮಿತಿಯ ಕಾರ್ಯದರ್ಶಿ ಸದಾಶಿವ ಎ ಕರ್ಕೇರಾ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ, ಮಹಿಳಾ ಪ್ರಧಾನ ಸಂಚಾಲಕಿ ಶ್ರೀಮತಿ ಗೀತಾಂಜಲಿ ಎಂ ಸುವರ್ಣ, ಸಂಚಾಲಕಿ ಸಾವಿತ್ರಿ ಗಣೇಶ್, ಕಾಪು ದಿವಾಕರ ಶೆಟ್ಟಿ, ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…