Featured

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭ  – vishwanews24

ಕಾಪು ಶ್ರೀ ಹೊಸ ಮಾರಿಗುಡಿ :  ಫೆ. 25ರಿಂದ ಮಾ.5ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

ಮಹಾವೈಭವಕ್ಕೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ ಕಾಪು ..

ಭರದಿಂದ ಸಾಗುತ್ತಿವೆ ಅಂತಿಮ ಸಿದ್ಧತೆಗಳು..

ಕಾಪು: ಸಂಪೂರ್ಣ ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ.

ಫೆ. 25ರಿಂದ ಮಾರ್ಚ್‌ 5ರವರೆಗೆ ನಡೆಯುವ ನವ ದಿನಗಳ ವೈಭವಕ್ಕೆ ಇನ್ನು 4 ದಿನಗಳು ಬಾಕಿ ಉಳಿದಿದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿವೆ.  ಹಿಂದೆಂದೂ ಕಾಣದ ಮಹಾವೈಭವಕ್ಕೆ ಸಾಕ್ಷಿಯಾಗಲು ಕಾಪು ಸಜ್ಜಾಗುತ್ತಿದೆ.

ಚಪ್ಪರ ಅಳವಡಿಕೆ, ದೇವಸ್ಥಾನದ ಸುತ್ತಮುತ್ತ ಮತ್ತು ನಗರ ಸುಂದರೀಕರಣದಂತಹ ಕಾರ್ಯಕ್ರಮಗಳಿಗೆ ವೇಗ ನೀಡಲಾಗಿದೆ. ದೇವಸ್ಥಾನದ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯೊಳಗೆ ಉತ್ತಮ ಪಾರ್ಕಿಂಗ್‌ ವ್ಯವಸ್ಥೆ ,  ಪ್ರತೀ ದಿನ 20ರಿಂದ 30 ಸಾವಿರದಷ್ಟು ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ , ಪ್ರತೀ ದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ವ್ಯವಸ್ಥೆ ,  ಪ್ರತಿ ದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಮಾರಿಗುಡಿ ಬ್ರಹ್ಮಕಲಶೋತ್ಸವ ಸಂದರ್ಭ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದಲೂ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿಯಿಂದ ಉದ್ಯಾ ವರದವರೆಗೆ ಹೆದ್ದಾರಿ ಅಲಂಕಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.

ಬ್ರಹ್ಮಕಲಶೋತ್ಸವವನ್ನು ಕೇವಲ ಧಾರ್ಮಿಕತೆಗೆ ಸೀಮಿತವಾಗಿರಿಸದೇ ಪ್ರವಾಸೋದ್ಯಮಕ್ಕೂ ಒತ್ತು ನೀಡಿ, ಇಲ್ಲಿಗೆ ಬರುವ ಜನರಿಗೆ ಉತ್ತಮ ಆತಿಥ್ಯ, ಸೌಕರ್ಯ ಒದಗಿಸಲು ಪ್ರಯತ್ನಿಸಲಾಗುವುದು. ಆಗಮಿಸುವ ಭಕ್ತರು, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುವುದರ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್‌ ಬಂದೋಬಸ್ತ್ಗೂ ವ್ಯವಸ್ಥೆ ಮಾಡಿಕೊಡಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago