ಕಾಪು: ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ.
ಫೆ. 25ರಿಂದ ಮಾರ್ಚ್ 5ರವರೆಗೆ ನಡೆಯುವ ನವ ದಿನಗಳ ವೈಭವಕ್ಕೆ ಇನ್ನು 4 ದಿನಗಳು ಬಾಕಿ ಉಳಿದಿದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಹಿಂದೆಂದೂ ಕಾಣದ ಮಹಾವೈಭವಕ್ಕೆ ಸಾಕ್ಷಿಯಾಗಲು ಕಾಪು ಸಜ್ಜಾಗುತ್ತಿದೆ.
ಚಪ್ಪರ ಅಳವಡಿಕೆ, ದೇವಸ್ಥಾನದ ಸುತ್ತಮುತ್ತ ಮತ್ತು ನಗರ ಸುಂದರೀಕರಣದಂತಹ ಕಾರ್ಯಕ್ರಮಗಳಿಗೆ ವೇಗ ನೀಡಲಾಗಿದೆ. ದೇವಸ್ಥಾನದ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯೊಳಗೆ ಉತ್ತಮ ಪಾರ್ಕಿಂಗ್ ವ್ಯವಸ್ಥೆ , ಪ್ರತೀ ದಿನ 20ರಿಂದ 30 ಸಾವಿರದಷ್ಟು ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ , ಪ್ರತೀ ದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ವ್ಯವಸ್ಥೆ , ಪ್ರತಿ ದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಮಾರಿಗುಡಿ ಬ್ರಹ್ಮಕಲಶೋತ್ಸವ ಸಂದರ್ಭ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದಲೂ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿಯಿಂದ ಉದ್ಯಾ ವರದವರೆಗೆ ಹೆದ್ದಾರಿ ಅಲಂಕಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಬ್ರಹ್ಮಕಲಶೋತ್ಸವವನ್ನು ಕೇವಲ ಧಾರ್ಮಿಕತೆಗೆ ಸೀಮಿತವಾಗಿರಿಸದೇ ಪ್ರವಾಸೋದ್ಯಮಕ್ಕೂ ಒತ್ತು ನೀಡಿ, ಇಲ್ಲಿಗೆ ಬರುವ ಜನರಿಗೆ ಉತ್ತಮ ಆತಿಥ್ಯ, ಸೌಕರ್ಯ ಒದಗಿಸಲು ಪ್ರಯತ್ನಿಸಲಾಗುವುದು. ಆಗಮಿಸುವ ಭಕ್ತರು, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುವುದರ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತ್ಗೂ ವ್ಯವಸ್ಥೆ ಮಾಡಿಕೊಡಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…