ಕಾಪು ಶ್ರೀ ಹೊಸ ಮಾರಿಗುಡಿ : ಸೆ.3ರಂದು ಮಂಗಳ ಗೌರಿ ಪೂಜೆ  , ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭೆ – vishwanews24

Featured, ಉಡುಪಿ

ಕಾಪು ಶ್ರೀ ಹೊಸ ಮಾರಿಗುಡಿ : ಸೆ.3ರಂದು ಮಂಗಳ ಗೌರಿ ಪೂಜೆ  , ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭೆ

ಕಾಪು: ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ಹಂತದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ಮಾರಿಯಮ್ಮನ ಸನ್ನಿಧಿಯಲ್ಲಿ 2025ರ ಮಾರ್ಚ್‌ನಲ್ಲಿ ನಡೆಯುವ ಜೀರ್ಣೋದ್ಧಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆಬ್ರವರಿಯಲ್ಲಿ ನವದುರ್ಗಾ ಲೇಖನ ಯಜ್ಞ ನಡೆಯಲಿದೆ.

ಕಾರ್ಯಕ್ರಮದ ಪೂರ್ವ ಭಾವಿಯಾಗಿ ಸೆ.3ರಂದು ಬೆಳಗ್ಗೆ ಶ್ರೀಕ್ಷೇತ್ರದಲ್ಲಿ ಮಂಗಳ ಗೌರಿ ಪೂಜೆಯೊಂದಿಗೆ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ತಿಳಿಸಿದರು.

ಜಗತ್ತಿನೆಲ್ಲೆಡೆ ನೆಲೆಸಿರುವ ಮಾರಿಯಮ್ಮ ದೇವಿಯ ಭಕ್ತರನ್ನು ಸೇರಿಸಿಕೊಂಡು ನವದುರ್ಗಾ ಲೇಖನ ಯಜ್ಞ ಹಾಗೂ ನವಚಂಡಿಯಾಗ ನಡೆಸಲಾಗುತ್ತಿದ್ದು, ನವ ದುರ್ಗಾ ಲೇಖನ ಯಜ್ಞದಲ್ಲಿ ಭಾಗವಹಿಸಲು ಬಯಸುವ ಭಕ್ತರು ಸಂಕಲ್ಪ ಸ್ವೀಕರಿಸಲು ಈ ಕಾರ್ಯಕ್ರಮದಂದು ಅವಕಾಶ ಒದಗಿಸಿಕೊಡಲಾಗುತ್ತಿದೆ ಎಂದರು.

ಆಂಧ್ರ – ತೆಲಂಗಾಣದಲ್ಲಿ ವರುಣನ ಅಬ್ಬರ : 140 ರೈಲುಗಳು ರದ್ದು – vishwanews24

ನವದುರ್ಗಾ ಲೇಖನ ಯಜ್ಞದಲ್ಲಿ ಭಾಗವಹಿಸುವ ಭಕ್ತರು ನವದುರ್ಗಾ ಲೇಖನ ಯಜ್ಞದ ಪುಸ್ತಕ ಪಡೆಯಲು 199 ರೂ. ನೀಡಿ, ಹೆಸರು ನೋಂದಾಯಿಸಿದರೆ, ಮಂಗಳಗೌರಿ ಪೂಜೆಯಲ್ಲಿ ಪಾಲ್ಗೊಂಡು, ನವದುರ್ಗಾ ಲೇಖನ ಯಜ್ಞದ ಸಂಕಲ್ಪ ಸ್ವೀಕರಿಸಲು ಅವಕಾಶ ಮಾಡಿಕೊಡಲಾಗುವುದು. ಅ.28 ರ ವರೆಗೆ ನೋಂದಣಿಗೆ ಅವಕಾಶವಿದೆ .

ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ.ಕುಮಾರ ಗುರು ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ಸೆ.3 ರಂದು ಬೆಳಗ್ಗೆ 8.30ಕ್ಕೆ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆಯೊಂದಿಗೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ ನೀಡಲಾಗುವುದು. 9 ಗಂಟೆಗೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ಭೋಜನ ವಿತರಣೆ ನಡೆಯಲಿದೆ. ಬೆಳಗ್ಗೆ 10.15ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಅವಧೂತ ವಿನಯ್ ಗುರೂಜಿ ಉದ್ಘಾಟಿಸಲಿದ್ದಾರೆ. ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಉಡುಪಿ: ಜಮೀನಿನ ಪಹಣಿಗೆ ಆಧಾರ್‌ ಜೋಡಣೆ ಕಡ್ಡಾಯ: ಡಿಸಿ ಡಾ| ಕೆ. ವಿದ್ಯಾಕುಮಾರಿ – vishwanews24

Leave a Reply