Featured

ಕಾಪು : ಸಂವಿಧಾನವನ್ನು ರಕ್ಷಿಸಿಕೊಳ್ಳಲು ನಾವೆಲ್ಲರೂ ಒಂದುಗೂಡಬೇಕಿದೆ , ಇದು ಸರ್ವಧರ್ಮಗಳ ಜನರ ಕರ್ತವ್ಯ : ವಿನಯ್ ಕುಮಾರ್ ಸೊರಕೆ – vishwanews24

ರಕ್ಷಣಾಪುರ ಜವನೆರ್ ಕಾಪು ನೇತೃತ್ವದಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ..

ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು  ಕಾಂಗ್ರೆಸ್ ಪಕ್ಷ ಕಾರ್ಯಕರ್ತರು  ಭಾಗಿ ..

ಬೈಬಲ್, ಭಗವದ್ಗೀತೆ, ಕುರಾನ್ ಧರ್ಮಗೃಂಥಗಳಷ್ಠೆ ಸಂವಿಧಾನವೂ ಪವಿತ್ರ : ನಿಕೇತ್ ರಾಜ್ ಮೌರ್ಯ ..

ದೇಶ ಕೇವಲ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯಾದದ್ದಲ್ಲ , 70 ವರ್ಷಗಳಿಂದಲೂ ಅಭಿವೃದ್ಧಿಯ ಕ್ರಾಂತಿಯಾಗಿದೆ : ಜಯಪ್ರಕಾಶ್ ಹೆಗ್ಡೆ ..

ಸಂವಿಧಾನದ ಪಾವಿತ್ರ್ಯತೆಯನ್ನು ಉಳಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ : ಸುಧೀರ್ ಕುಮಾರ್ ಮುರೋಳಿ ..

ಕಾಪು: ಸಂವಿಧಾನ ನಮಗೆ ಬದುಕುವ ಹಕ್ಕನ್ನು ನೀಡಿದ್ದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರವಾಗಿದೆ. ಬೈಬಲ್, ಭಗವದ್ಗೀತೆ, ಕುರಾನ್ ಧರ್ಮಗೃಂಥಗಳಷ್ಠೆ ಸಂವಿಧಾನವೂ ಪವಿತ್ರವಾಗಿದೆ. ಇಂದಿನ ಯುವಜನರಿಗೆ ಅದರ ಭೋದನೆಯಾಗಬೇಕಿದೆ. ಈ ಸಂವಿಧಾನವನ್ನು ಉಳಿಸಿಕೊಂಡು ಬರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಅದಕ್ಕಾಗಿ ನಾವು ಹೋರಾಟ ಮಾಡುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ ಎಂದು ಪ್ರಗತಿಪರ ಚಿಂತಕ ನಿಕೇತ್ ರಾಜ್ ಮೌರ್ಯ ಹೇಳಿದರು.

ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಮಂಗಳವಾರ ಕಾಪು ಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಅವರು ದಿಕ್ಕೂಚಿ ಭಾಷಣ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ನಮ್ಮ ಸಂವಿಧಾನ ನಮ್ಮ ಹಕ್ಕು ಡಾ| ಬಿ.ಆರ್. ಅಂಬೇಡ್ಕರ್ ಅವರು ಅರ್ಪಿಸಿದ ಸಂವಿಧಾನವನ್ನು ರಕ್ಷಿಸಿಕೊಳ್ಳುವುದಕ್ಕಾಗಿ ನಾವೆಲ್ಲರೂ ಒಂದುಗೂಡಬೇಕಿದೆ. ಇದು ಸರ್ವಧರ್ಮಗಳ ಜನರ ಕರ್ತವ್ಯವೂ ಆಗಿದೆ. ಸಂವಿಧಾನ ಉಳಿಸಿ ಜಾಥಾ ಮೂಲಕವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದೇವೆ. ರಕ್ಷಣಾಪುರ ಜನವನೆರ್ ಸಂಘಟನೆಯೊಂದಿಗೆ ವಿವಿಧ ಸಂಘಟನೆಗಳು ಕೂಡಾ ಕೈ ಜೋಡಿಸುವ ಮೂಲಕ ಕಾರ್ಯಕ್ರಮದ ಉದ್ದೇಶವು ಸಾರ್ಥಕವಾಗಿದೆ ಎಂದರು.

ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಸಂವಿಧಾನ ನಮಗೆಲ್ಲರಿಗೂ ಸಮಾನತೆಯೊಂದಿಗೆ ಬದುಕುವ ಹಕ್ಕನ್ನು ಕೊಟ್ಟಿದೆ. ದೇಶ ಕೇವಲ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯಾದದ್ದಲ್ಲ. ಬದಲಿಗೆ ಕಳೆದ 70 ವರ್ಷಗಳಿಂದಲೂ ವಿವಿಧ ರೀತಿಯ ಅಭಿವೃದ್ಧಿಯ ಕ್ರಾಂತಿಯಾಗಿದೆ. ದೇಶದ ಅಭಿವೃದ್ಧಿಯ ಬಗ್ಗೆ ನಾವು ಅವಲೋಕನ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಸಂವಿಧಾನವನ್ನು ಉಳಿಸಿಕೊಳ್ಳಬೇಕಿದೆ ಎಂದರು.

ಪ್ರಗತಿಪರ ಚಿಂತಕ ಸುಧೀರ್ ಕುಮಾರ್ ಮುರೋಳಿ ಮಾತನಾಡಿ, ಭಾರತದ ಸಂವಿಧಾನ ಪವಿತ್ರವಾಗಿದೆ. ಅದರ ಪಾವಿತ್ರ್ಯತೆಯನ್ನು ಉಳಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂವಿಧಾನ ಉಳಿಸಿ ಕಾರ್ಯಕ್ರಮ ಪೂರಕವಾಗಿದೆ ಎಂದರು.

ಧಾರ್ಮಿಕ ಮುಖಂಡರಾದ ವೇ। ಮೂ| ಶ್ರೀನಿವಾಸ ತಂತ್ರಿ ಕಲ್ಯ, ಪೊಲಿಪು . ಜಾಮಿಯಾ ಮಸೀದಿಯ ಧರ್ಮಗುರು ಇರ್ಷಾದ್ ಸಅದಿ, ರೆ| ಫಾ| ವಿಲಿಯಂ ಮಾರ್ಟಿಸ್ ಆಶೀರ್ವಚನ ನೀಡಿದರು.

ಸಂವಿಧಾನ ಉಳಿಸಿ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀನಿವಾಸ್ ತಂತ್ರಿ ಕಲ್ಯ, ರಾಘು ಪೂಜಾರಿ ಕಲ್ಮಂಜೆ, ಶೇಖರ ಹೆಜಮಾಡಿ, ಮಹೇಶ್ ಶೆಣೈ, ಸ್ಪೂರ್ತಿ ಶೆಟ್ಟಿ, ಜಾನಪದ ಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಕಾಪು ಪೇಟೆಯವರೆಗೆ ಸಾಗಿ ಬಂದ ಮೆರವಣಿಗೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರೂ ಸೇರಿದಂತೆ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಶೆಟ್ಟಿ, ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಸುಂದರ ಮಾಸ್ತರ್, ಆನಂದ ಬ್ರಹ್ಮಾವರ, ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಳೆಬೈಲು, ನವೀನ್ಚಂದ್ರ ಸುವರ್ಣ, ಸಂತೋಷ್ ಕುಲಾಲ್ ಪಕ್ಕಾಲು, ಕಾಪು ದಿವಾಕರ ಶೆಟ್ಟಿ, ನವೀನ್ಚಂದ್ರ ಜೆ. ಶೆಟ್ಟಿ, ಶಿವಾಜಿ ಎಸ್. ಸುವರ್ಣ, ಶಾಂತಲತಾ ಶೆಟ್ಟಿ, ಗೀತಾ ವಾಗ್ಲೆ, ವೆರೋನಿಕಾ ಕರ್ನೆಲಿಯೋ, ಶರ್ಪುದ್ದೀನ್ ಶೇಖ್, ವಿಶ್ವಾಸ್ ಅಮೀನ್, ಹರೀಶ್ ಕಿಣಿ, ರಮೇಶ್ ಕಾಂಚನ್, ದಿನಕರ ಹೇರೂರು ಮೊದಲಾದವರು ಉಪಸ್ಥಿತರಿದ್ದರು.

ಸಂಘಟನೆಯ ಅಧ್ಯಕ್ಷ ನವೀನ್ ಎನ್. ಶೆಟ್ಟಿ ವಂದಿಸಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago