Featured

ಕಾಪು : ಸಪ್ಟೆಂಬರ್ 2 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಸಪ್ಟೆಂಬರ್ 2 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಮಾಹಿತಿ ಕಾರ್ಯಾಗಾರ

ಪ್ರಧಾನಿ ನರೇಂದ್ರ ಮೋದೀಜಿಯವರ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸಪ್ಟೆಂಬರ್ ೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಪಕ್ಷದ ಪ್ರಮುಖರು, ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಕಾರ್ಯಕರ್ತರು, ಹಿತೈಶಿಗಳು 8800002024 ಕ್ಕೆ ಮಿಸ್ಡ್ ಕಾಲ್ ನೀಡಿ ಬಿಜೆಪಿ ಸದಸ್ಯತ್ವ ಪಡೆಯಲು ಜಿಲ್ಲಾ ಸಂಚಾಲಕರಾದ ಮಟ್ಟಾರು ರತ್ನಾಕರ್ ಹೆಗ್ಡೆಯವರು ತಿಳಿಸಿದರು.

ಕಾಪು ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ನಡೆದ ಈ ಒಂದು ಕಾರ್ಯಗಾರದ ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ವಹಿಸಿದರು.
ಸಪ್ಟೆಂಬರ್ ೨ರಿಂದ ೨೫ರವರೆಗೆ, ಅಕ್ಟೋಬರ್ ೧ರಿಂದ ಅಕ್ಟೋಬರ್ ೧೫ ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್
ಕ್ಯೂಆರ್ ಕೋಡ್ ಸ್ಕಾನ್ ಮೂಲಕ ನಮೋ ಆಪ್ ಮೂಲಕ ನೋಂದಾವಣಿ ಮಾಡಬಹುದು. ಅಕ್ಟೋಬರ್ ೧೫ರಿಂದ ೩೦ರವರೆಗೆ ಮನೆ-ಮನೆ ಭೇಟಿ ಮೂಲಕ ಸದಸ್ಯತ್ವ ಅಭಿಯಾನ ನಡೆಯಲಿದೆ. ಪ್ರತೀ ಬೂತ್ ಮಟ್ಟದಲ್ಲಿ ಕನಿಷ್ಟ ೩೦೦ ಸದಸ್ಯರನ್ನು ನೋಂದಾಯಿಸಬೇಕೆ0ದು ತಿಳಿಸಿದರು.

ಈ ಸಂಧರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ
ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಗಿರೀಶ್ ಅಂಚನ್, ನಿಕಟಪೂರ್ವ ಜಿಲ್ಲಾ ಪ್ರಧಾನಕಾರ್ಯದರ್ಶಿಯಾದ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರಾದ ನಯನಾ ಗಣೇಶ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್  ಕುಮಾರ್ ಮಟ್ಟು, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ರೈತ ಮೋರ್ಚಾ ಅಧ್ಯಕ್ಷರಾದ ಕೃಷ್ಣ ರಾವ್, ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಪುರಸಭಾ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ ಮತ್ತು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರನಿಧಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

13 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

14 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago