ಕಾಪು : ಕಾಪು ಠಾಣಾ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಬಿ.ಲಕ್ಷ್ಮಣ್ ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಈ ಹಿಂದೆ ಉಡುಪಿ ನಗರ ಠಾಣೆ , ಮಲ್ಪೆ,ಬ್ರಹ್ಮಾವರ, ಕಟಪಾಡಿ ಹೊರ ಠಾಣೆಯಲ್ಲಿ ಎಎಸೈ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ.ಲಕ್ಷ್ಮಣ್ (58) ಕಳೆದ ಕೆಲವುದಿನಗಳಿಂದ ಅಸೌಖ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಪುತ್ತೂರು ಮೂಲದ ಇವರು ಕಾಪು ಠಾಣೆಯಲ್ಲಿ ಐದು ವರ್ಷಗಳ ಕಾಲ ಕ್ರೈಮ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ಹಲವಾರು ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಒಳಗಾಗಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…