ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ ಕಾಪುವಿನ ಪ್ರಖ್ಯಾತ ನಾಟಕ ಸಂಸ್ಥೆ “ರಂಗತರಂಗ” ದ ಸ್ಥಾಪಕ, ಖ್ಯಾತ ನಟ, ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಬುಧವಾರ ಸಂಜೆ ಕುಟುಂಬಿಕರ, ಗಣ್ಯರ, ಸಾವಿರಾರು ಅಭಿಮಾನಿಗಳ ಅಶ್ರು ತರ್ಪಣದೊಂದಿಗೆ ತಮ್ಮ ಮನೆ ಹಿಂಬದಿಯ ಗದ್ದೆಯಲ್ಲಿ ಪಂಚ ಭೂತಗಳಲ್ಲಿ ಲೀನವಾದರು.
ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ಕಾಪು ರಾಹೆ ೬೬ರ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನಿಂದ ಬೃಹತ್ ಮೆರವಣಿಗೆಯಲ್ಲಿ ಕರಂದಾಡಿ ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದವರೆಗೆ ಮೃತದೇಹಗಳನ್ನು ಕೊಂಡೊಯ್ಯಲಾಯಿತು.
ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದಲ್ಲಿ ದಿವಂಗತ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ದಿವಂಗತ ವಸುಂಧರಾ ಶೆಟ್ಟಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು.ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಅಶ್ರುತರ್ಪಣದೊಂದಿಗೆ ಅಂತಿಮ ನಮನ ಸಲ್ಲಿಸಿದರು.
ಲೀಲಾಧರ ಶೆಟ್ಟಿಯವರ ಮನೆ ಹಿಂಬದಿಯ ಗದ್ದೆಯಲ್ಲಿ ದಂಪತಿಗಳ ಮೃತ ದೇಹಕ್ಕೆ ಕುಟುಂಬಿಕರ, ಗಣ್ಯರ ಸಮ್ಮುಖ ಅಂತಿಮ ನಮನ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಲಾಯಿತು.
ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಹಳೆ ಮಾರಿಯಮ್ಮ ದೇಗುಲದ ಮೊಕ್ತೇಸರ ಪ್ರಸಾದ್ ಶೆಣೈ, ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದ ಆಡಳಿತಾಧಿಕಾರಿ ಅರುಣ್ ಕುಮಾರ್ ಬಿಕೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಉದ್ಯಮಿಗಳು, ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು.
ಕಾಪು ಪೇಟೆ ಬಂದ್: ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರ ನಿಧನದ ಪ್ರಯುಕ್ತ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…