Featured

ಕಾಪು : ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತ ದ ಭೀತಿ ; ವಿಳಂಬ ಕಾಮಗಾರಿ – ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ – Vishwanews24

ಈ ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ : ಸೊರಕೆ

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತ ದ ಭೀತಿಯಿಂದ ಆತಂಕದಿಂದ ದಿನಗಳೆಯುವ ಪರಿಸ್ಥಿತಿ ಉಂಟಾಗಿದ್ದು ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ ಖಂಡಿಸಿ ಸ್ಥಳೀಯರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಈ ಹಿಂದೆ ಸಮುದ್ರ ದಡದಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ, ಹೊಸತಾಗಿ ಸದೃಢವಾದ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ವಾಗ್ದಾನ ಮಾಡಿ ಯಾವುದೇ ರೀತಿಯ ಕಾಮಗಾರಿಯನ್ನು ಕೈಗೊಳ್ಳದ ಪರಿಣಾಮ ಈ ಪರಿಸರದ 8 ರಿಂದ 10 ಮನೆಗಳು ಮತ್ತು ಹಲವಾರು ತೆಂಗಿನಮರಗಳು ನೀರು ಪಾಲಾಗುವ ಹಂತದಲ್ಲಿವೆ.

ಇದರಿಂದಾಗಿ ಸ್ಥಳೀಯ ನಿವಾಸಿಗಳು ಆತಂಕದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿ ಇಲ್ಲಿನ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಯವರಿಗೆ, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಮತ್ತು ಗುತ್ತಿಗೆದಾರರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದು, ಎಲ್ಲರೂ ಶೀಘ್ರದಲ್ಲೇ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇದೀಗ 3 ತಿಂಗಳು ಕಳೆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಕಾರಣ ಮತ್ತು ಮಳೆಗಾಲವು ಪ್ರಾರಂಭವಾಗಿದ್ದು ಮನೆ-ಮರಗಳು ಸಮುದ್ರ ಪಾಲಾಗುವ ಭೀತಿಯಿದೆ ಎಂದು ಆರೋಪಿಸಿದರು.

ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಫರ್ಜಾನಾ, ಶೋಭಾ ಬಂಗೇರ, ಸ್ಥಳೀಯರಾದ ರಾಜೇಶ್ ಮೆಂಡನ್, ಸುಧಾಕರ ಸಾಲ್ಯಾನ್, ಅಶ್ವಿನಿ ಬಂಗೇರ, ಲವ ಕರ್ಕೇರ, ದೇವರಾಜ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago