Featured

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ : ದೂರು ದಾಖಲು – Vishwanews24

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ದೂರು ದಾಖಲು

ಕಾಪು : ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಕಾಪುವಿನ ಪಡು ಗ್ರಾಮದ ದಯಾನಂದ ಸುವರ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ತಾಯಿ ಜಾನಕಿರವರಿಗೆ ಕಾಪು ತಾಲೂಕಿನ ಪಡು ಗ್ರಾಮದ ಸರ್ವೆ ನಂಬ್ರ 66/10 ರಲ್ಲಿ ಸ್ಥಿರಾಸ್ತಿ ಹೊಂದಿದ್ದು, ಅವರ ಮರಣ ನಂತರ ವಾರೀಸು ನೆಲೆಯಲ್ಲಿ ಸ್ಥಿರಾಸ್ತಿಯನ್ನು ದಯಾನಂದ ಸುವಣ9 ಅವರು ಅನುಭವಿಸಿಕೊಂಡು ಬರುತ್ತಿದ್ದಾರೆ. ಸ್ಥಿರಾಸ್ತಿಯಲ್ಲಿರುವ ಮನೆಯಲ್ಲಿ 5 ವಷ9ದ ಹಿಂದೆ ಆರೋಪಿ ಹೇಮಂತ್ ಕೋಟ್ಯಾನ್ ಬಾಡಿಗೆಗೆ ವಾಸವಾಗಿದ್ದು ಬಳಿಕ ಮನೆ ಬಿಟ್ಟು ಬೇರೆ ಕಡೆಗೆ ಹೋಗಿರುತ್ತಾರೆ. ನಂತರ ಆರೋಪಿ ಲೀಲಾಧರ ಕೋಟ್ಯಾನ್, ಯಶೋಧ ಇವರು ಮನೆಯಲ್ಲಿ ಬಾಯ್ದೆರೆಯಲ್ಲಿ ವಾಸಮಾಡಿಕೊಂಡಿದ್ದು, ಬಳಿಕ ಮನೆಯನ್ನು ಬಿಟ್ಟುಕೊಡದೇ ಇದ್ದು ಈ ಬಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಲ್ಲದೆ ಸ್ಥಿರಾಸ್ತೀಯಲ್ಲಿರುವ ನಾಗಬನದ ಅಭಿವೃದ್ದಿ ಮತ್ತು ಜಿಣೊ9ದ್ಧಾರಕ್ಕಾಗಿ “ಶ್ರೀ ಆಶ್ವಥ ನಾರಾಯಣ ನಾಗ ಸನ್ನಿಧಿ ಟ್ರಸ್ಟ್” ಇದ್ದು ಪೂಜಾ ವಿಧಾನಗಳನ್ನು ನೆಡೆಸಿಕೊಂಡು ಬರುತ್ತಾರೆ. ದಯಾನಂದ ಸುವರ್ಣ ಅವರು ಟ್ರಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ನಾಗಬನದ ಜಿರ್ಣೋದ್ದಾರಕ್ಕಾಗಿ ಸರಕಾರದಿಂದ ಬರುವ ಅನುಧಾನ ಪಡೆಯಲು ಅರ್ಜಿ ಸಲ್ಲಿಸಿದ್ದರು. ಹೇಮಂತ್ ಕೋಟ್ಯಾನ್ ಮತ್ತು ಯಶೋಧ ಸೇರಿ ಸರಕಾರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆಕ್ಷೇಪಣೆಯನ್ನು ಸಲ್ಲಿಸಿ, ಮಹಜರುಗಳಿಗೆ ನಕಲಿ ಸಹಿಗಳನ್ನು ತಯಾರಿಸಿ ಅನುದಾನ ಮಂಜೂರಾಗದಂತೆ ಮಾಡಿದ್ದಾರೆ. ಆರೋಪಿಗಳು ಈ ಎಲ್ಲಾ ವಿಚಾರಗಳಿಂದ ದಯಾನಂದ ಸುವರ್ಣ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಷ್ಟ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

21 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago