ಕಾಪು :ಜ.29ರಂದು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ .
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಥಮ ಬಾರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಉದ್ಯೋಗಾಕಾಂಕ್ಷಿ ಭಾಗವಹಿಸುವ ನಿರೀಕ್ಷೆಯಿದ್ದು, 1 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ. ಕನಿಷ್ಠ 50 ಪ್ರತಿಷ್ಠಿತ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿದ್ದು ಸ್ಥಳೀಯ ಕಂಪನಿಗಳು ಕೂಡಾ ಭಾಗವಹಿಸುತ್ತಿವೆ. ಪ್ರತಿಯೊಬ್ಬ ಅಭ್ಯರ್ಥಿಗಳಿಗೆ 3 ರಿಂದ 5 ಕಂಪನಿಗಳಲ್ಲಿ ಸಂದರ್ಶನಗಳಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುತ್ತದೆ.
ರಾಜ್ಯದ ವಿವಿಧೆಡೆಯ 50ಕ್ಕೂ ಹೆಚ್ಚು ಕಂಪನಿಗಳನ್ನು ಆಹ್ವಾನಿಸಲಾಗಿದೆ. ನೋಂದಣಿ ಮಾಡಿಸಿಕೊಂಡವರಿಗೆ ಅರ್ಹತೆಯ ಆಧಾರದಲ್ಲಿ ಉದ್ಯೋಗ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.
ಅಭ್ಯರ್ಥಿಗಳು ಕಡ್ಡಾಯವಾಗಿ ನೋಂದಣಿ ಮಾಡಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ, ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಕನಿಷ್ಠ ಐದು ಸ್ವ ವಿವರಗಳ ಪ್ರತಿ, ಶೈಕ್ಷಣಿಕ ದಾಖಲೆಗಳ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ವಿವರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…