ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜ್ : ಮುಂದುವರಿದ ಹಿಜಾಬ್ ವಿವಾದ ; ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು – Vishwanews24

Featured, ಉಡುಪಿ
  • ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜ್ : ಕೋರ್ಟ್ ಆದೇಶದ ಬಳಿಕವೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು 

  • 17 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ಹಿಜಾಬ್ ತೆಗೆದು ತರಗತಿಗೆ ಹಾಜರಾದ ನಾಲ್ಕು ಮಂದಿ..

  • ಹಿಜಾಬ್ ತೆಗೆಯಲು ನಿರಾಕರಿಸಿ, ತರಗತಿ ಬಹಿಷ್ಕರಿಸಿ ಹಿಂದೆ ತೆರಳಿದ 9 ಮಂದಿ..

ಕಾಪು: ತರಗತಿಯಲ್ಲಿ ಹಿಜಾಬ್ ಧರಿಸುವುದಕ್ಕೆ‌ ಅವಕಾಶವಿಲ್ಲ ಎಂಬ ಹೈಕೋರ್ಟ್ ಆದೇಶದ ಬಳಿಕವೂ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದೆ.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 9 ಮಂದಿ ವಿದ್ಯಾರ್ಥಿನಿಯರು ಬುಧವಾರ ಬೆಳಗ್ಗೆ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ‌ ಆಗಮಿಸಿದ್ದು ಪ್ರಾಂಶುಪಾಲರು ಹಿಜಾಬ್ ಸಹಿತವಾಗಿ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ಹಿಂತೆರಳಿದ್ದಾರೆ.

ಹಿಜಾಬ್ ವಿವಾದದ ಬಳಿಕ ಒಂದು ತಿಂಗಳಿನಿಂದ ತರಗತಿ ಮಿಸ್ ಮಾಡಿಕೊಂಡಿದ್ದ ವಿದ್ಯಾರ್ಥಿನಿಯರು ಬುಧವಾರ ಬೆಳಗ್ಗೆ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದರು. ಆದರೆ ಹಿಜಾಬ್ ಧರಿಸಿಕೊಂಡು ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೇ ಹಿಂತೆರಳಿದ್ದಾರೆ.

ಕಾಲೇಜಿನಲ್ಲಿ 17 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದು ಇವರ ಪೈಕಿ ನಾಲ್ಕು ಮಂದಿ ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದು, 9 ಮಂದಿ ಹಿಜಾಬ್ ತೆಗೆಯಲು ನಿರಾಕರಿಸಿ, ತರಗತಿ ಬಹಿಷ್ಕರಿಸಿ ಹಿಂದೆ ತೆರಳಿದ್ದಾರೆ.

ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರನ್ನು ಮನವೊಲಿಸಲು ಪ್ರಯತ್ನಿಸಲಾಯಿತಾದರೂ, ಯಾವುದಕ್ಕೂ ಒಪ್ಪದ ಕಾರಣ ಅವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ.

ದಂಡತೀರ್ಥ ಪಿ.ಯು. ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ : vishwanews24

Leave a Reply