Featured

ಕಾಪು :ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ -Vishwanews24

ಕಾಪು: ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಿಂತನೆಯೊಂದಿಗೆ ಯೋಜನಾ ಪಟ್ಟಿ ಸಹಿತವಾದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಅದಕ್ಕೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸಲಿದೆ. ಪೂರ್ವ ಭಾವಿಯಾಗಿ ಶಾಸಕರು ಸೂಚಿಸಿದ ಪ್ರದೇಶಗಳಿಗೆ ತೆರಳಿ ಪರಿಶೀಲನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಹೇಳಿದರು.

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರ ಅಪೇಕ್ಷೆಯ ಮೇರೆಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಸಮಸ್ಯೆಗಳನ್ನು ಪರಿಶೀಲನೆ ನಡೆಸಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ತಾಲೂಕಿನ ವಿವಿಧ ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಯಾವುದೆಲ್ಲಾ ಕೆಲಸಗಳನ್ನು ತುರ್ತಾಗಿ ನಡೆಸಬೇಕು, ಯಾವುದಕ್ಕೆ ಪ್ರಥಮ ಆದ್ಯತೆ ಕೊಡಬೇಕು ಎನ್ನುವುದರ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸರಕಾರಕ್ಕೆ ವರದಿ ನೀಡಲಾಗುವುದು ಎಂದರು.

ಹೆದ್ದಾರಿ ಸಮಸ್ಯೆ ಬಗ್ಗೆ ವಿಶೇಷ ಸಭೆ ನಡೆಸಿ ಕ್ರಮ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಯಲ್ಲಿನ ಅಸ್ತವ್ಯಸ್ತತೆ, ಇದರಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳು ಮತ್ತು ಸಮಸ್ಯೆಗಳ ಬಗ್ಗೆ ಹಲವಾರು ರೀತಿಯ ಮನವಿಗಳು ಮತ್ತು ದೂರುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ. ಈಗಾಗಲೇ ಈ ಬಗ್ಗೆ ಜನಪ್ರತಿನಿಧಿಗಳು, ಸ್ಥಳೀಯರು ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.

ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಪುರಸಬಾ ಮುಖ್ಯಾಧಿಕಾರಿ ರಾಯಪ್ಪ, ಕಂದಾಯ ನಿರೀಕ್ಷಕ ರವಿಶಂಕರ್‌ ಕೆ., ಪುರಸಭಾ ಸದಸ್ಯ ಅನಿಲ್‌ ಕುಮಾರ್‌, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ಕ್ಷೇತ್ರಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಗಂಗಾಧರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

16 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

16 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

18 hours ago