ಕಾಪು: ರಾಷ್ಟ್ರೀ ಹೆದ್ದಾರಿ 66ರ ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಪೊಲೀಸ್ ಠಾಣೆಯ ಎಎಸ್‌ಐ ರವೀಶ್ ಹೊಳ್ಳ ಸಿಬ್ಬಂದಿಗಳ ಜತೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರವಿವಾರ ಸಂಜೆ 6.30 ಗಂಟೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ 6 ಜನ ಪುರುಷರು ಸೇರಿಕೊಂಡು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈ-ಕೈ ಮಿಲಾಯಿಸಿಕೊಂಡು ಹೊಡೆದಾಡುತ್ತಿರುವುದನ್ನು ಗಮನಿಸಿದ್ದರು.
ಕೂಡಲೇ ಸ್ಥಳಕ್ಕೆ ಹೋಗಿ ಜಗಳವನ್ನು ತಡೆಯಲು ಮುಂದಾಗಿದ್ದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದು ಈ ವೇಳೆ 6 ಜನರಲ್ಲಿ 4 ಜನರು ಓಡಿ ಹೋಗಿದ್ದರು. ಉಳಿದ ಇಬ್ಬರನ್ನು ವಿಚಾರಿಸಲಾಗಿದ್ದು ಅವರು ಸ್ಥಳೀಯ ಬಾರ್‌ವೊಂದರಲ್ಲಿ ಕುಡಿದು ಯಾವುದೋ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆಸಿ ಪರಸ್ಪರ ಜಗಳ ಮಾಡುತ್ತಿದ್ದುದಾಗಿ ತಿಳಿಸಿದ್ದರು.
ಅದರಂತೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವಂತೆ ಹೊಡೆದಾಡಿಕೊಳ್ಳುತ್ತಿದ್ದ ಹಂಜಾ ಶೇಖ್, ತುಫೇಲ್ ಹಾಗೂ ಸ್ಥಳದಿಂದ ಓಡಿ ಹೋಗಿರುವ ಮಸಾಬ್ ಉಚ್ಚಿಲ, ನಮೀತ್ ಉಚ್ಚಿಲ, ಸುಜಿತ್ ಉಚ್ಛಿಲ, ಕೃಷ್ಣರಾಜ ಕರ್ಕೇರ ಮೂಳೂರು ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…