Featured

ಕಾಪು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ; 6 ಮಂದಿಯ ವಿರುದ್ಧ ಪ್ರಕರಣ ದಾಖಲು – vishwanews24

ಕಾಪು: ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: 6 ಮಂದಿಯ ವಿರುದ್ಧ ಪ್ರಕರಣ ದಾಖಲು

ಕಾಪು: ರಾಷ್ಟ್ರೀ ಹೆದ್ದಾರಿ 66ರ ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು ಪೊಲೀಸ್ ಠಾಣೆಯ ಎಎಸ್‌ಐ ರವೀಶ್ ಹೊಳ್ಳ ಸಿಬ್ಬಂದಿಗಳ ಜತೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರವಿವಾರ ಸಂಜೆ 6.30 ಗಂಟೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ 6 ಜನ ಪುರುಷರು ಸೇರಿಕೊಂಡು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈ-ಕೈ ಮಿಲಾಯಿಸಿಕೊಂಡು ಹೊಡೆದಾಡುತ್ತಿರುವುದನ್ನು ಗಮನಿಸಿದ್ದರು.

ಕೂಡಲೇ ಸ್ಥಳಕ್ಕೆ ಹೋಗಿ ಜಗಳವನ್ನು ತಡೆಯಲು ಮುಂದಾಗಿದ್ದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದು ಈ ವೇಳೆ 6 ಜನರಲ್ಲಿ 4 ಜನರು ಓಡಿ ಹೋಗಿದ್ದರು. ಉಳಿದ ಇಬ್ಬರನ್ನು ವಿಚಾರಿಸಲಾಗಿದ್ದು ಅವರು ಸ್ಥಳೀಯ ಬಾರ್‌ವೊಂದರಲ್ಲಿ ಕುಡಿದು ಯಾವುದೋ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆಸಿ ಪರಸ್ಪರ ಜಗಳ ಮಾಡುತ್ತಿದ್ದುದಾಗಿ ತಿಳಿಸಿದ್ದರು.

ಅದರಂತೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವಂತೆ ಹೊಡೆದಾಡಿಕೊಳ್ಳುತ್ತಿದ್ದ ಹಂಜಾ ಶೇಖ್, ತುಫೇಲ್ ಹಾಗೂ ಸ್ಥಳದಿಂದ ಓಡಿ ಹೋಗಿರುವ ಮಸಾಬ್ ಉಚ್ಚಿಲ, ನಮೀತ್ ಉಚ್ಚಿಲ, ಸುಜಿತ್ ಉಚ್ಛಿಲ, ಕೃಷ್ಣರಾಜ ಕರ್ಕೇರ ಮೂಳೂರು ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

41 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

59 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

1 hour ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

2 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago