ಕಾಪು: ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಾಪು ತಾಲೂಕಿನ ಕಡಲೊರೆತ ಪುದೇಶಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದ ಬಳಿಕ ರಾಜೀವ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಸಂದರ್ಭ ಪತ್ರಕರ್ತರು, ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಶಾಸಕ ಜಮೀರ್ ಅಹಮ್ಮದ್ ಅವರ ಅಧಿಕ ಪ್ರಸಂಗಿತನದ ಮಾತಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಅದರ ಬಗ್ಗೆ ಈಗ ಚರ್ಚೆ ನಡೆಸುವುದು ಅಪ್ರಸ್ತುತವಾಗುತ್ತದೆ. ನಮ್ಮಲ್ಲಿ ಪಕ್ಷ ಮೊದಲು, ಅಭ್ಯರ್ಥಿ ನಂತರ ಎಂಬ ಸಿದ್ಧಾಂತವಿದ್ದು, ಅದೇ ರೀತಿಯಲ್ಲಿ ನಾವು ಬೆಳೆದು ಬಂದಿದ್ದೇವೆ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಸೃಷ್ಟಿಸುವವರು, ಲಾಬಿ ನಡೆಸುತ್ತಿರುವವರು, ಲಾಬಿಗೆ ಪ್ರೇರಣೆ ನೀಡುವವರ ವಿರುದ್ಧ ಪಕ್ಷ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದಂದು ಸಿದ್ಧರಾಮೋತ್ಸವ ನಡೆಯುತ್ತಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗವಾಗಿದ್ದು, ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಶಕ್ತಿ ಪುದರ್ಶನ ನಡೆಯಲಿದೆ. ಕಾಂಗ್ರೆಸ್ ಪಕ್ಷ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ, ಜನಸಂಪರ್ಕ ಶಿಬಿರ, ಸಂಘಟನೆ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಅದರಂತೆ ಇದು ಕೂಡಾ ಅದರ ಭಾಗವಾಗಿದೆ ಎಂದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್‌ಚಂದ್ರ ಜೆ. ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮಹಿಳಾ ಕಾಂಗ್ರೆಸ್ ಮುಖಂಡರಾದ ಶಾಂತಾಲತಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…