ಕಾಪು ಸುಗ್ಗಿಮಾರಿಪೂಜೆ ಪೊಲೀಸ್ ಉಪಾಧೀಕ್ಷಕರಿಂದ ಬಂದೋಬಸ್ತು ಬ್ರೀಫಿಂಗ್
ಕಾಪು: ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿಮಾರಿಪೂಜೆಯ ಬಂದೋಬಸ್ತಿಗಾಗಿ ಕಾರ್ಕಳ ಪೋಲಿಸ್ ಉಪಾಧೀಕ್ಷಕರಾದ ಭರತ್ ರೆಡ್ಡಿಯವರಿಂದ ಪೊಲೀಸ್ ಬ್ರೀಫಿಂಗ್ ಹಳೇ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸುಗ್ಗಿಮಾರಿಪೂಜೆಯ ದಿನದಂದು ನಡೆಯುವ ಬಂದೋಬಸ್ತಿನಲ್ಲಿ ಸುಮಾರು ಕಾಪು ನಗರದಲ್ಲಿ 9 ಚೆಕ್ ಪೋಸ್ಟ್ ಮಾಡಲಾಗಿದ್ದು ನಾಲ್ಕು ಸೆಕ್ಟರ್ ನಿರ್ಮಾಣ ಮಾಡಿ ಬಂದೋಬಸ್ತು ಏರ್ಪಡಿಸಲಾಗಿದೆ.
ಬಂದೋಬಸ್ತಿನಲ್ಲಿ 1 DYSP,2 ಸರ್ಕಲ್ ಇನ್ಸ್‌ಪೆಕ್ಟರ್,8 ಮಂದಿ ಪಿ.ಎಸ್.ಐ,22 ಮಂದಿ ಎ ಸ್ ಐ ,ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಸೇರಿ 210 ಮಂದಿ ಪೊಲೀಸ್ ಸಿಬ್ಬಂದಿಗಳು ಬಂದೋಬಸ್ತಿನಲ್ಲಿರುತ್ತಾರೆ ಎಂದು ತಿಳಿಸಿದರು.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಾಹನ ಪಾರ್ಕಿಂಗ್ ಮಾಡಲು ಕಾಪು ಡಿಗ್ರಿ ಕಾಲೇಜು ಮೈದಾನ,ವಿದ್ಯಾನಿಕೇತನ ಶಾಲೆಯ ಮೈದಾನ,ಬಂಗ್ಲೆಮೈದಾನ,ಬಂಟರ ಸಂಘದ ಮೈದಾನ,ಪುರಸಭೆಯ ಆವರಣ,ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ,ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ ಸಿ,ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…